ADVERTISEMENT

ತೇಜ್‌ಕುಮಾರ್‌ಗೆ ₹ 10 ಲಕ್ಷ ಬಹುಮಾನ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 19:30 IST
Last Updated 21 ಸೆಪ್ಟೆಂಬರ್ 2017, 19:30 IST
ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಗುರುವಾರ ನಡೆದ ದಸರಾ ಕ್ರೀಡಾಕುಟದ ಉದ್ಘಾಟನಾ ಸಮಾರಂಭದಲ್ಲಿ ಕ್ರಿಕೆಟ್‌ ಆಟಗಾರ್ತಿಯರಾದ ವೇದಾ ಕೃಷ್ಣಮೂರ್ತಿ(ಎಡ), ರಾಜೇಶ್ವರಿ ಗಾಯಕವಾಡ್‌(ಬಲ), ಹಾಗೂ ಚೆಸ್‌ ಗ್ರ್ಯಾಂಡ್‌ಮಾಸ್ಟ್‌ರ್‌ ಎಂ.ಎಸ್‌. ತೇಜ್‌ಕುಮಾರ್‌ ಅವರನ್ನು ಸನ್ಮಾನಿಸಲಾಯಿತು.

ಮೈಸೂರು: ರಾಜ್ಯದ ಮೊದಲ ಚೆಸ್‌ ಗ್ರ್ಯಾಂಡ್‌ಮಾಸ್ಟರ್‌ ಎಂ.ಎಸ್‌.ತೇಜ್‌ಕುಮಾರ್‌ ಅವರಿಗೆ ಕ್ರೀಡಾ ಇಲಾಖೆಯು ₹ 10 ಲಕ್ಷ ಬಹುಮಾನ ಘೋಷಿಸಿದೆ.

ದಸರಾ ಕ್ರೀಡಾಕೂಟ ಉದ್ಘಾಟನೆ ವೇಳೆ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಈ ಘೋಷಣೆ ಮಾಡಿದರು.

ಸಾಧಕ ತೇಜ್‌ಕುಮಾರ್‌ ಅವರನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ‘ಪ್ರಜಾವಾಣಿ’ ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ADVERTISEMENT

‘ಗ್ರ್ಯಾಂಡ್‌ಮಾಸ್ಟರ್ ಪದವಿ ಗಿಟ್ಟಿಸಲು ತರಬೇತಿ ಹಾಗೂ ಪ್ರವಾಸಕ್ಕೆಂದು 2 ವರ್ಷಗಳಲ್ಲಿ ₹ 20 ಲಕ್ಷ ಖರ್ಚು ಮಾಡಿದ್ದೇನೆ. ಆದರೆ, ಸರ್ಕಾರದಿಂದ ಬಹುಮಾನ ಬಿಟ್ಟುಬಿಡಿ; ಅಭಿನಂದನೆಯ ಸಂದೇಶವೂ ಬಂದಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.