ADVERTISEMENT

ದೀಪಾ ನೇಮಕಕ್ಕೆ ಆಗ್ರಹ

ಪಿಟಿಐ
Published 8 ಸೆಪ್ಟೆಂಬರ್ 2016, 19:30 IST
Last Updated 8 ಸೆಪ್ಟೆಂಬರ್ 2016, 19:30 IST
ದೀಪಾ
ದೀಪಾ   

ಅಗರ್ತಲಾ: ರಿಯೊ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದ ಜಿಮ್ನಾಸ್ಟ್‌ ದೀಪಾ ಕರ್ಮಾಕರ್ ಅವರನ್ನು ಭಾರತದ ‘ಬ್ರ್ಯಾಂಡ್‌’ ರಾಯಭಾರಿಯನ್ನಾಗಿ ಮಾಡಬೇಕೆಂದು ಭಾರತ ಫುಟ್‌ಬಾಲ್ ತಂಡದ ಮಾಜಿ ನಾಯಕ ಪ್ರಸುನ್‌ ಬ್ಯಾನರ್ಜಿ ಆಗ್ರಹಿಸಿದ್ದಾರೆ.

‘ಪ್ರತಿಯೊಬ್ಬರೂ ಹೆಮ್ಮೆ ಪಡುವಂಥ ಸಾಧನೆ ಯನ್ನು ಅವರು ಮಾಡಿದ್ದಾರೆ. ಆದ್ದರಿಂದ ‘ಬ್ರ್ಯಾಂಡ್‌ ರಾಯಭಾರಿ’ ಯಾಗಿ ಮಾಡುವುದರಲ್ಲಿ ತಪ್ಪೇನೂ ಇಲ್ಲ. ಈ ವಿಷಯವನ್ನು ಮುಂದಿನ ಸಂಸ ತ್ತಿನ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.