ADVERTISEMENT

ಫೈನಲ್‌ ಪ್ರವೇಶಿಸಿದ ನಡಾಲ್‌

ಏಜೆನ್ಸೀಸ್
Published 21 ಏಪ್ರಿಲ್ 2018, 19:30 IST
Last Updated 21 ಏಪ್ರಿಲ್ 2018, 19:30 IST
ರಫೆಲ್‌ ನಡಾಲ್‌ ಚೆಂಡನ್ನು ಹಿಂತಿರುಗಿಸಲು ಮುಂದಾದ ಕ್ಷಣ –ಎಎಫ್‌ಪಿ ಚಿತ್ರ
ರಫೆಲ್‌ ನಡಾಲ್‌ ಚೆಂಡನ್ನು ಹಿಂತಿರುಗಿಸಲು ಮುಂದಾದ ಕ್ಷಣ –ಎಎಫ್‌ಪಿ ಚಿತ್ರ   

ಮಾಂಟೆ ಕಾರ್ಲೊ: ಮಿಂಚಿನ ಆಟ ಆಡಿದ ಸ್ಪೇನ್‌ನ ರಫೆಲ್‌ ನಡಾಲ್‌, ಎಟಿಪಿ ಮಾಂಟೆ ಕಾರ್ಲೊ ಮಾಸ್ಟರ್ಸ್‌ ಟೆನಿಸ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿದ್ದಾರೆ.

ಶನಿವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ ಹಣಾಹಣಿಯಲ್ಲಿ ನಡಾಲ್‌ 6–4, 6–1ರ ನೇರ ಸೆಟ್‌ಗಳಿಂದ ಬಲ್ಗೇರಿಯಾದ ಗ್ರಿಗರ್‌ ದಿಮಿಟ್ರೊವ್‌ ವಿರುದ್ಧ ಗೆದ್ದರು.

ಇದರೊಂದಿಗೆ ಟೂರ್ನಿಯಲ್ಲಿ 11ನೇ ಬಾರಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟ ಸಾಧನೆ ಮಾಡಿದರು.

ADVERTISEMENT

ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನಡಾಲ್‌, ಆರಂಭದಿಂದಲೇ ಆಕ್ರಮಣಕಾರಿ ಆಟ ಆಡಿದರು. ಮೊದಲ ಗೇಮ್‌ನಲ್ಲಿ ಸರ್ವ್‌ ಕಾಪಾಡಿಕೊಂಡ ಅವರು ಎರಡನೇ ಗೇಮ್‌ನಲ್ಲಿ ಎದುರಾಳಿಯ ಸರ್ವ್‌ ಮುರಿದರು.

ಮೂರನೇ ಗೇಮ್‌ನಲ್ಲೂ ಮಿಂಚು ಹರಿಸಿ 3–0ರ ಮುನ್ನಡೆ ಗಳಿಸಿದರು. ಇದರಿಂದ ದಿಮಿಟ್ರೊವ್‌ ಎದೆಗುಂದಲಿಲ್ಲ. ಗುಣಮಟ್ಟದ ಆಟ ಆಡಿದ ಅವರು 4–4ರಲ್ಲಿ ಸಮಬಲ ಮಾಡಿಕೊಂಡರು. ನಂತರ ನಡಾಲ್‌ ಅಬ್ಬರಿಸಿದರು. ಚುರುಕಿನ ಸರ್ವ್‌ ಮತ್ತು ಆಕರ್ಷಕ ಹಿಂಗೈ ಹೊಡೆತಗಳ ಮೂಲಕ ಎದುರಾಳಿಯನ್ನು ತಬ್ಬಿಬ್ಬುಗೊಳಿಸಿದ ಅವರು ಗೆಲುವಿನ ತೋರಣ ಕಟ್ಟಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.