ADVERTISEMENT

ಬೆಂಗಳೂರಿನಲ್ಲಿ ಫೆ. 16ಕ್ಕೆ ಐಪಿಎಲ್‌ ಹರಾಜು

​ಪ್ರಜಾವಾಣಿ ವಾರ್ತೆ
Published 30 ಜನವರಿ 2015, 19:30 IST
Last Updated 30 ಜನವರಿ 2015, 19:30 IST

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟ್ವೆಂಟಿ–20 ಕ್ರಿಕೆಟ್‌ನ ಎಂಟನೇ ಆವೃತ್ತಿಯ ಆಟಗಾರರ ಹರಾಜು ಬೆಂಗಳೂರಿನಲ್ಲಿ ಫೆಬ್ರುವರಿ 16 ರಂದು ನಡೆಯಲಿದೆ. ‘ಆಟಗಾರರ ಹರಾಜು ಪ್ರಕ್ರಿಯೆ ಮೂಲಕ ಐಪಿಎಲ್‌ನ ಎಂಟನೇ ಋತುವಿನ ಟೂರ್ನಿಗೆ ಕ್ಷಣಗಣನೆ ಆರಂಭವಾಗಲಿದೆ.

ವಿಶ್ವದ ಕೆಲವು ಪ್ರಮುಖ ಆಟಗಾರರು ಹರಾಜು ಪಟ್ಟಿಯಲ್ಲಿದ್ದಾರೆ’ ಎಂದು ಐಪಿಎಲ್‌ ಮುಖ್ಯಸ್ಥ ರಂಜಿಬ್‌ ಬಿಸ್ವಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.