ನವದೆಹಲಿ (ಪಿಟಿಐ): ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಸೆಪ್ಟೆಂಬರ್ನಲ್ಲಿ ನಡೆಯಬೇಕಿದ್ದ ಎರಡನೇ ಆವೃತ್ತಿಯ ಇಂಡಿಯನ್ ಬ್ಯಾಡ್ಮಿಂಟನ್ ಲೀಗ್ (ಐಬಿಎಲ್) ಟೂರ್ನಿಯನ್ನು 2015ರ ಆರಂಭದಲ್ಲಿ ನಡೆಸಲು ನಿರ್ಧರಿಸಿದೆ.
ಈ ಮೊದಲು ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15ರವರೆಗೆ ಟೂರ್ನಿಯ ದಿನಾಂಕ ನಿಗದಿಯಾ ಗಿತ್ತು. ಆದರೆ ಜುಲೈನಲ್ಲಿ ಕಾಮನ್ ವೆಲ್ತ್ ಮತ್ತು ಸೆಪ್ಟೆಂಬರ್ನಲ್ಲಿ ಏಷ್ಯನ್ ಕ್ರೀಡಾಕೂಟ ನಡೆಯಲಿದ್ದು, ವಿಶ್ವದ ಅಗ್ರಮಾನ್ಯ ಆಟಗಾರರು ಟೂರ್ನಿಗೆ ಅಲಭ್ಯರಾಗುವ ಸಾಧ್ಯತೆ ಇದೆ. ಹೀಗಾಗಿ ಬಿಎಐ ಈ ಬಾರಿ ನಡೆಯಬೇಕಿದ್ದ ಟೂರ್ನಿಯನ್ನು ಮುಂದೂಡಿದೆ.
‘ಕಾಮನ್ವೆಲ್ತ್ ಹಾಗೂ ಏಷ್ಯನ್ ಕ್ರೀಡಾಕೂಟಗಳು ಇರುವುದರಿಂದ ಐಬಿಎಲ್ ಟೂರ್ನಿಯನ್ನು 2015ಕ್ಕೆ ಮುಂದೂಡ ಬೇಕಾಯಿತು’ ಎಂದು ಬಿಎಐ ಆಡಳಿತ ವಿಭಾಗದ ಉಪಾ ಧ್ಯಕ್ಷ ಟಿ.ಪಿ.ಎಸ್. ಪುರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.