ADVERTISEMENT

ಬ್ಯಾಡ್ಮಿಂಟನ್‌: ಸಿಂಧು ಮೇಲೆ ನಿರೀಕ್ಷೆ

ಪಿಟಿಐ
Published 20 ನವೆಂಬರ್ 2017, 20:06 IST
Last Updated 20 ನವೆಂಬರ್ 2017, 20:06 IST
ಪಿ.ವಿ.ಸಿಂಧು
ಪಿ.ವಿ.ಸಿಂಧು   

ಕೌಲೂನ್‌, ಹಾಂಕಾಂಗ್‌: ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಸಾಧನೆ ಮಾಡಿರುವ ಪಿ.ವಿ.ಸಿಂಧು ಮಂಗಳವಾರದಿಂದ ನಡೆಯುವ ಹಾಂಕಾಂಗ್‌ ಓಪನ್‌ ಸೂಪರ್‌ ಸರಣಿ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಸವಾಲು ಎತ್ತಿ ಹಿಡಿಯಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ ವಿಭಾಗದ ಆರಂಭಿಕ ಸುತ್ತಿನ ಹಣಾಹಣಿಯಲ್ಲಿ ಸಿಂಧು, ಅರ್ಹತಾ ಸುತ್ತಿನಲ್ಲಿ ಗೆದ್ದುಬಂದ ಆಟಗಾರ್ತಿಯ ವಿರುದ್ಧ ಸೆಣಸಲಿದ್ದಾರೆ.

ವಿಶ್ವ ರ‍್ಯಾಂಕಿಂಗ್‌ನಲ್ಲಿ 11ನೇ ಸ್ಥಾನದಲ್ಲಿರುವ ಸೈನಾ ನೆಹ್ವಾಲ್‌, ಡೆನ್ಮಾರ್ಕ್‌ನ ಮೆಟ್ಟೆ ಪೌಲ್‌ಸೆನ್‌ ಎದುರು ಆಡುವ ಮೂಲಕ  ಅಭಿಯಾನ
ಆರಂಭಿಸಲಿದ್ದಾರೆ.

ADVERTISEMENT

ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಕೆ.ಶ್ರೀಕಾಂತ್‌ ಆಡುತ್ತಿಲ್ಲ. ಹೀಗಾಗಿ ಎಚ್‌.ಎಸ್‌.ಪ್ರಣಯ್‌ ಮೇಲೆ ನಿರೀಕ್ಷೆ ಹೆಚ್ಚಿದೆ. ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಪ್ರಣಯ್‌ ಆರಂಭಿಕ ಸುತ್ತಿನಲ್ಲಿ ಹು ಯುನ್‌ ವಿರುದ್ಧ ಆಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.