ADVERTISEMENT

ಭಾರತದ ಎದುರಾಳಿ ದಕ್ಷಿಣ ಆಫ್ರಿಕಾ

ಪಿಟಿಐ
Published 24 ಏಪ್ರಿಲ್ 2018, 19:30 IST
Last Updated 24 ಏಪ್ರಿಲ್ 2018, 19:30 IST

ಕೋಲ್ಕತ್ತ: ಭಾರತ ತಂಡ 2019ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ.

ಜೂನ್‌ 5ರಂದು ಈ ಹಣಾಹಣಿ ನಿಗದಿಯಾಗಿದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್‌ 29ರಿಂದ ಮೇ 19ರವರೆಗೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 12ನೇ ಆವೃತ್ತಿಯ ಟೂರ್ನಿ ನಡೆಯಲಿದೆ. ಇದು ಮುಗಿದ ನಂತರ ಭಾರತದ ಆಟಗಾರರು ಇಂಗ್ಲೆಂಡ್‌ಗೆ ಹೋಗಲಿದ್ದಾರೆ.

ADVERTISEMENT

ಜೂನ್‌ 16 ರಂದು ಮ್ಯಾಂಚೆಸ್ಟರ್‌ ನಲ್ಲಿ ನಡೆಯುವ ತನ್ನ ಎರಡನೇ ಪೈಪೋಟಿಯಲ್ಲಿ ಭಾರತ ತಂಡ ಪಾಕಿಸ್ತಾನದ ಎದುರು ಸೆಣಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.