ADVERTISEMENT

ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿ ಸೈನಾ ನೆಹ್ವಾಲ್‌ಗೆ ಗೆಲುವು

ಪಿಟಿಐ
Published 22 ಜನವರಿ 2017, 15:48 IST
Last Updated 22 ಜನವರಿ 2017, 15:48 IST
ಸೈನಾ ನೆಹ್ವಾಲ್‌
ಸೈನಾ ನೆಹ್ವಾಲ್‌   

ಸರಾವಕ್, ಮಲೇಷ್ಯಾ: ಭಾರತದ ಸೈನಾ ನೆಹ್ವಾಲ್‌ ಅವರು ಮಲೇಷ್ಯಾ ಮಾಸ್ಟರ್ಸ್‌ ಗ್ರ್ಯಾಂಡ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಟೂರ್ನಿಯ ಸಿಂಗಲ್ಸ್‌ನ ಫೈನಲ್‌ನಲ್ಲಿ ಜಯ ಗಳಿಸಿದ್ದಾರೆ.

ಭಾನುವಾರ ನಡೆದ ಫೈನಲ್‌ನಲ್ಲಿ ಭಾರತದ ಆಟಗಾರ್ತಿ ಸೈನಾ ನೆಹ್ವಾಲ್‌, ಥಾಯ್ಲೆಂಡ್‌ನ ಪೊರ್ನಪವೀ ಚಚೊವ್‌ವುಂಗ್ ವಿರುದ್ಧ  22–20, 22–20 ಸೆಟ್‌ಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಸೈನಾ ಶನಿವಾರ ನಡೆದ ಸೆಮಿಫೈನಲ್‌ನಲ್ಲಿ 21–13, 21–10ರಲ್ಲಿ ಯಿಪ್‌ ಪುಯಿ ಯಿನ್ ಎದುರು ಸುಲಭ ಗೆಲುವು ಪಡೆದಿದ್ದರು.

ADVERTISEMENT

ಮಂಡಿ ನೋವಿನ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಸೈನಾ ನೆಹ್ವಾಲ್‌ ಗೆಲುವು ಸಾಧಿಸಿದ ಮೊದಲ ಟೂರ್ನಿ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.