ADVERTISEMENT

ರ್‍ಯಾಂಕಿಂಗ್‌: ಭಾರತಕ್ಕೆ ಎರಡನೇ ಸ್ಥಾನ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2014, 20:19 IST
Last Updated 17 ಡಿಸೆಂಬರ್ 2014, 20:19 IST

ದುಬೈ (ಪಿಟಿಐ):ಭಾರತ ಕ್ರಿಕೆಟ್ ತಂಡ ಇತ್ತೀಚೆಗೆ ಬಿಡುಗಡೆಯಾದ ಐಸಿಸಿ ಏಕದಿನ ರ್‍ಯಾಂಕಿಂಗ್ ಪಟ್ಟಿಯಲ್ಲಿ  ಎರಡನೇ ಸ್ಥಾನದಲ್ಲಿದೆ. 

ಆಸ್ಟ್ರೇಲಿಯ ಹಾಗೂ ಭಾರತ ತಂಡಗಳು 117 ರೇಟಿಂಗ್‌ ಪಾಯಿಂಟ್ಸ್‌ ಹೊಂದಿದ್ದರೂ, 0.2 ಪಾಯಿಂಟ್ಸ್‌ಗಳ ಅಂತರದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ.

ದಕ್ಷಿಣ ಆಫ್ರಿಕಾ 112 ಪಾಯಿಂಟ್ಸ್‌ಗಳಿಂದ ಮೂರನೇ ಸ್ಥಾನ ದಲ್ಲಿದೆ.  ಶ್ರೀಲಂಕಾ, ಇಂಗ್ಲೆಂಡ್‌, ಪಾಕಿಸ್ತಾನ ಹಾಗೂ ವೆಸ್ಟ್‌ಇಂಡೀಸ್‌ ತಂಡಗಳು ಕ್ರಮವಾಗಿ ನಾಲ್ಕು, ಐದು, ಆರು ಮತ್ತು ಏಳನೇ ಸ್ಥಾನಗಳಲ್ಲಿವೆ. ಬ್ಯಾಟಿಂಗ್‌ ಪಟ್ಟಿಯಲ್ಲಿ ವಿರಾಟ್‌ ಕೊಹ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದರೆ, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್‌ ಮೊದಲನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.