ADVERTISEMENT

ವಿಂಬಲ್ಡನ್‌: ಫಿಕ್ಸಿಂಗ್ ಶಂಕೆ

ಏಜೆನ್ಸೀಸ್
Published 20 ಜುಲೈ 2017, 19:30 IST
Last Updated 20 ಜುಲೈ 2017, 19:30 IST

ಲಂಡನ್‌: ಈ ಬಾರಿಯ ವಿಂಬಲ್ಡನ್ ಟೂರ್ನಿಯ ಮೂರು ಪಂದ್ಯಗಳಲ್ಲಿ ಫಿಕ್ಸಿಂಗ್ ನಡೆದಿರುವ ಶಂಕೆ ಉಂಟಾಗಿದ್ದು ತನಿಖೆಗೆ ಒಳಪಡುವ ಸಾಧ್ಯತೆ ಇದೆ.

ಈ ವಿಷಯ ಗುರುವಾರ ಬಯಲುಗೊಂಡಿದೆ. ರೋಹೆಂಪ್ಟನ್‌ನಲ್ಲಿ ನಡೆದ ಅರ್ಹತಾ ಸುತ್ತಿನ ಎರಡು ಪಂದ್ಯಗಳು ಮತ್ತು ಪ್ರಧಾನ ಸುತ್ತಿನ ಒಂದು ಪಂದ್ಯದ ಮೇಲೆ ನಿಗಾ ಇರಿಸಲಾಗಿತ್ತು.

ಆ ಮೂಲಕ ಲಭಿಸಿದ ಮಾಹಿತಿಯ ಆಧಾರದಲ್ಲಿ ಹೆಚ್ಚಿನ ಪರಿಶೀಲನೆ ನಡೆಯಲಿದೆ ಎಂದು ವೃತ್ತಿಪರ ಟೆನಿಸ್‌ ಮೇಲೆ ಕಣ್ಗಾವಲು ಇರಿಸುವ ಭ್ರಷ್ಟಾಚಾರ ನಿಗ್ರಹ ಘಟಕದವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.