ADVERTISEMENT

ವಿರಾಟ್‌ ಕೊಹ್ಲಿಗೆ ಕುತ್ತಿಗೆ ನೋವು: ಕೌಂಟಿ ಟೂರ್ನಿಯಿಂದ ಹೊರಕ್ಕೆ

ಏಜೆನ್ಸೀಸ್
Published 24 ಮೇ 2018, 9:22 IST
Last Updated 24 ಮೇ 2018, 9:22 IST
ವಿರಾಟ್‌ ಕೊಹ್ಲಿ (ಸಂಗ್ರಹ ಚಿತ್ರ).
ವಿರಾಟ್‌ ಕೊಹ್ಲಿ (ಸಂಗ್ರಹ ಚಿತ್ರ).   

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಕುತ್ತಿಗೆ ನೋವಿನಿಂದ ಬಳಲುತ್ತಿದ್ದು, ಇಂಗ್ಲೆಂಡ್‌ನಲ್ಲಿ ನಡೆಯಲಿದ್ದ ಕೌಂಟಿ ಕ್ರಿಕೆಟ್‌ ಟೂರ್ನಿಯಿಂದ ಹೊರ ಉಳಿದಿದ್ದಾರೆ.

ಈ ಕುರಿತು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಸ್ಪಷ್ಟಪಡಿಸಿದೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌)ನಲ್ಲಿ ಆರ್‌ಸಿಬಿ ತಂಡದ ಪರ ಆಡಿದ್ದ ವಿರಾಟ್‌, ಪಂದ್ಯದ ವೇಳೆ ಕುತ್ತಿಗೆ ನೋವು ಕಾಣಿಸಿಕೊಂಡು ಚಿಕಿತ್ಸೆ ಪಡೆದಿದ್ದರು.

ADVERTISEMENT

‘ಜೂನ್‌ 15ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ(ಎನ್‌ಸಿಎ) ಫಿಟ್‌ನೆಸ್‌ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣುವ ಭರವಸೆ ಇದೆ ಎಂದು ತಪಾಸಣೆ ನಡೆಸುತ್ತಿರುವ ವೈದ್ಯರ ತಂಡ ಖಚಿತಪಡಿಸಿದೆ.

ಜೂನ್ 14ರಿಂದ ಆರಂಭವಾಗುವ ಅಫ್ಗಾನಿಸ್ತಾನ ಎದುರಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಆಡುತ್ತಿಲ್ಲ.

ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಿನಲ್ಲಿ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ.

ಇದನ್ನೂ ಓದಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.