ADVERTISEMENT

ಮಕ್ಕಳ ಹಕ್ಕು ರಕ್ಷಣೆಗೆ ಆ್ಯಪ್‌

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2016, 19:30 IST
Last Updated 22 ನವೆಂಬರ್ 2016, 19:30 IST
ಮಕ್ಕಳ ಹಕ್ಕು ರಕ್ಷಣೆಗೆ ಆ್ಯಪ್‌
ಮಕ್ಕಳ ಹಕ್ಕು ರಕ್ಷಣೆಗೆ ಆ್ಯಪ್‌   

ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಮತ್ತು ಮಕ್ಕಳ ಹಕ್ಕುಗಳನ್ನು ಸಂರಕ್ಷಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ‘ಚಿರಾಗ್’ (CHIRAG’)  ಆ್ಯಪ್ ಅಭಿವೃದ್ಧಿಪಡಿಸಿದೆ.
 
ರಾಜ್ಯದ ಯಾವುದೇ ಮೂಲೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಮಾಹಿತಿಯನ್ನು ಈ ಆ್ಯಪ್‌ಗೆ ಭರ್ತಿ ಮಾಡಿದ ಕೂಡಲೇ ಅದು ಮಕ್ಕಳ ಸಹಾಯವಾಣಿ ಕೇಂದ್ರಗಳು ಮತ್ತು ಪೊಲೀಸರಿಗೆ ರವಾನೆಯಾಗುತ್ತದೆ. ನಂತರ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ರಕ್ಷಣೆ ಮಾಡುತ್ತಾರೆ.

ದೂರು ನೀಡಿದ ನಾಗರಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಈ ಆ್ಯಪ್‌ನಲ್ಲಿ ದೂರು ದಾಖಲಾದ  ಕೆಲವೇ ಕ್ಷಣಗಳಲ್ಲಿ ಮಾಹಿತಿಯು ರಾಜ್ಯದ  ಎಲ್ಲಾ ಪೊಲೀಸ್ ಠಾಣೆ ಮತ್ತು ಮತ್ತು ಮಕ್ಕಳ ಸಹಾಯವಾಣಿ ಕೇಂದ್ರಗಳಿಗೆ ರವಾನೆಯಾಗುತ್ತದೆ. ಜಿಪಿಆರ್್ಎಸ್ ತಂತ್ರಜ್ಞಾನದ ಮೂಲಕ ದೂರು ನೀಡಿದ ವ್ಯಕ್ತಿಯ ಸ್ಥಳವನ್ನು ಪತ್ತೆ ಮಾಡಿ ಕಾರ್ಯಾಚರಣೆ ನಡೆಸಲಾಗುತ್ತದೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು, ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು  ಕಳೆದು ಹೋದ ಮಕ್ಕಳನ್ನು ಹುಡುಕುಲೂ ಈ  ಆ್ಯಪ್ ನೆರವಾಗಲಿದೆ. chirag-app

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.