ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Last Updated 12 ಫೆಬ್ರುವರಿ 2016, 5:56 IST
ಅಕ್ಷರ ಗಾತ್ರ

ಉಡುಪಿ: ಉಡುಪಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಯ ಮಲ್ಪೆ ಸೆಂಟ್ರಲ್‌ ವಾರ್ಡ್‌ನ ಮಲ್ಪೆ–2, ಮಣಿಪುರ ಗ್ರಾಮದ ಕುಂತಳ ನಗರ, ಎಲ್ಲೂರು ಗ್ರಾಮದ ಎಲ್ಲೂರು ಮಹಿಳಾ ಮಂಡಲ ಉಳ್ಳೂರು, ನಡ್ಸಾಲು ಗ್ರಾಮದ ಪಡುಬಿದ್ರೆ–1, ಮಣಿಪಾಲ–ಈಶ್ವರನಗರ ವಾರ್ಡ್‌ನ ಆದರ್ಶನಗರ–2, ಪರ್ಕಳ ವಾರ್ಡ್‌ನ ಸಣ್ಣಕ್ಕಿಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

18ರಿಂದ 25 ವರ್ಷದೊಳಗಿನ ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿರುವ ಅದೇ ಗ್ರಾಮದ ಮಹಿಳಾ ಅಭ್ಯರ್ಥಿಗಳು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಉಡುಪಿ ಶಿಶು ಅಭಿವೃದ್ಧಿ ಯೋಜನೆಯ ಕಚೇರಿಯಲ್ಲಿರಿಸಿದ ಟೆಂಡರು ಪೆಟ್ಟಿಗೆಗೆ ಮಾರ್ಚ್‌ 3ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಉಡುಪಿ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT