ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಟಾರ್ಕ್ಟಿಕಾದಲ್ಲಿ ಮಂಜುಗಡ್ಡೆ ಕರಗುತ್ತಿದೆ: ಅಧ್ಯಯನ ವರದಿ

Last Updated 27 ಮಾರ್ಚ್ 2015, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ಅಂಟಾರ್ಕ್ಟಿಕಾ ಸಾಗರದಲ್ಲಿ ಕಾಣಸಿಗುವ ತೇಲುವ ಮಂಜುಗಡ್ಡೆಗಳು ಹವಾಮಾನ ವೈಪರೀತ್ಯದಿಂದಾಗಿ ಕರಗುತ್ತಿದ್ದು, ಈಗಾಗಲೇ ಅದರ ಗಾತ್ರಗಳಲ್ಲಿ ಶೇ 18ರಷ್ಟು ಕಡಿಮೆಯಾಗಿದೆ ಎಂದು ಹೊಸ ಅಧ್ಯಯನ ತಿಳಿಸಿದೆ.

ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಾಗರ ವಿಜ್ಞಾನಿಗಳ ತಂಡ ಈ ಬಗ್ಗೆ ಸಂಶೋಧನೆ ಕೈಗೊಂಡಿದ್ದು, ಎರಡು ದಶಕಗಳಿಂದ ಈ ಬಗ್ಗೆ ಸಂಗ್ರಹಿಸಿದ ದತ್ತಾಂಶಗಳ ಪ್ರಕಾರ 1994ರಿಂದ 2003ರವರೆಗೆ ಮಂಜುಗಡ್ಡೆ ಕರಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಯೇ ಇದಕ್ಕೆ ಕಾರಣ ಎಂದಿದ್ದಾರೆ.

‘ಮಂಜುಗಡ್ಡೆ ಕರಗುವುದರಿಂದ  ಕೇವಲ ಸಮುದ್ರದ ಮಟ್ಟದಲ್ಲಿ ಏರಿಕೆ ಕಾಣುವುದಲ್ಲದೆ, ಅನೇಕ ವ್ಯತಿರಿಕ್ತ ಪರಿಣಾಮಗಳಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT