ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣೆಕಟ್ಟು ಕಟ್ಟುವ ಹಕ್ಕು ನಮಗಿದೆ: ಪಾಟೀಲ್

Last Updated 20 ನವೆಂಬರ್ 2014, 13:09 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾವೇರಿ ನದಿ ನೀರು ನ್ಯಾಯಮಂಡಳಿಯ ಆದೇಶಗಳನ್ನು ಉಲ್ಲಂಘಿಸಿದೇ ಕಾವೇರಿ ನದಿಗೆ ಅಣೆಕಟ್ಟು ಕಟ್ಟುವ ಹಕ್ಕು ರಾಜ್ಯಕ್ಕಿದೆ ಎಂದು ಕರ್ನಾಟಕ ಸರ್ಕಾರ ಗುರುವಾರ ತಿಳಿಸಿದೆ.

‘ನ್ಯಾಯಮಂಡಳಿಯ ಯಾವುದೇ ಆದೇಶಗಳನ್ನು ಕರ್ನಾಟಕ ಸರ್ಕಾರ ಉಲ್ಲಂಘಿಸುತ್ತಿಲ್ಲ. ನಿಯಮದ ಪ್ರಕಾರ  ತಮಿಳುನಾಡಿಗೆ ನಾವು ಒಂದು ವರ್ಷಕ್ಕೆ ಸರಾಸರಿ 192 ಟಿಎಂಸಿ ಅಡಿ ನೀರನ್ನು ಕೊಡಬೇಕು. ಒಂದು ವೇಳೆ ಪ್ರವಾಹದ ಸಂದರ್ಭದಲ್ಲಿ ಹೆಚ್ಚುವರಿ ನೀರು ಲಭ್ಯವಾದರೆ ಅದನ್ನು ಬಳಸಿಕೊಳ್ಳುವ ಹಕ್ಕು ರಾಜ್ಯಕ್ಕಿದೆ’ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಅವರು ಇಲ್ಲಿ ತಿಳಿಸಿದ್ದಾರೆ.

ಹಳೆಯ ಮೈಸೂರು ಭಾಗದ ಕಾವೇರಿ ಜಲಾನಯನ ಪ್ರದೇಶದ ಮಾತ್ರವಲ್ಲದೇ ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ಅಗತ್ಯವಾಗಿದೆ ಎಂದು ಅವರು ನುಡಿದಿದ್ದಾರೆ.

‘ನೀರನ್ನು ವ್ಯರ್ಥವಾಗಲು ಏಕೆ ಬಿಡಬೇಕು. ಹಳೆಯ ಮೈಸೂರು ಭಾಗದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಬೆಂಗಳೂರಿನ ಮೂರನೇ ಎರಡರಷ್ಟು ಜನರಿಗೆ ಜೀವಜಲ ಸಿಗುತ್ತಿಲ್ಲ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT