ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರದ ಸಂತ್ರಸ್ತರ ಜಾತಿ ಅಧ್ಯಯನ: ಶಾಣಪ್ಪ

Last Updated 21 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರಕ್ಕೆ ಒಳಗಾಗಿ ರುವವರ ಜಾತಿ ಮತ್ತು ವರ್ಗಗಳ ಕುರಿತು ಅಧ್ಯಯನ ನಡೆಸಿ ಎಂ.ಸಿ. ನಾಣಯ್ಯ ನೇತೃತ್ವದ ಉನ್ನತಮಟ್ಟದ ಸಮಿತಿಗೆ ವರದಿ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಬಿ.ಶಾಣಪ್ಪ ಹೇಳಿದರು.

ಅತ್ಯಾಚಾರ ಪ್ರಕರಣಗಳ ನಿಯಂತ್ರಣ, ಕಾನೂನುಗಳ ತಿದ್ದುಪಡಿ, ಶಿಕ್ಷೆ ಪ್ರಮಾಣ ಹೆಚ್ಚಳ ಮತ್ತಿತರ ವಿಷಯಗಳ ಕುರಿತು ಅಧ್ಯಯನ ನಡೆಸಿ, ಶಿಫಾರಸು ನೀಡಲು ನಾಣಯ್ಯ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಎರಡು ಉಪ ಸಮಿತಿಗಳನ್ನು ರಚಿಸಿದ್ದು, ಒಂದು ಶಾಣಪ್ಪ ನೇತೃತ್ವ ದಲ್ಲಿದೆ. ಈ ಉಪ ಸಮಿತಿಯ ಸಭೆ ಶುಕ್ರವಾರ ವಿಧಾನಸೌಧದಲ್ಲಿ ನಡೆ ಯಿತು.

ಸಭೆಯ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಯಾವ ಜಾತಿ ಮತ್ತು ವರ್ಗಕ್ಕೆ ಸೇರಿದವರು ಹೆಚ್ಚಾಗಿ ಅತ್ಯಾಚಾರಕ್ಕೆ ಒಳಗಾಗು ತ್ತಿದ್ದಾರೆ ಎಂಬುದನ್ನು ಅರಿಯಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರು, ಮೇಲು ವರ್ಗಗಳಿಗೆ ಸೇರಿದವರು, ಕಾರ್ಮಿಕರು ಮತ್ತು ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳ ಅಂಕಿಸಂಖ್ಯೆಯನ್ನು ಪರಿಶೀಲನೆ ನಡೆಸ ಲಾಗುವುದು. ಈ ಕುರಿತು ಎರಡು ತಿಂಗಳಲ್ಲಿ ಉನ್ನತಮಟ್ಟದ ಸಮಿತಿಗೆ ವರದಿ ನೀಡಲಾಗುವುದು’ ಎಂದರು.

ವೇಶ್ಯಾವಾಟಿಕೆಯನ್ನು ಕಾನೂನು ಬದ್ಧಗೊಳಿಸಬೇಕು ಎಂಬ ಬೇಡಿಕೆಗೆ ತಮ್ಮ ವಿರೋಧವಿದೆ. ಮೈ ಮಾರಿ ಕೊಳ್ಳುವುದಕ್ಕೆ ಪ್ರೋತ್ಸಾಹ ನೀಡು ವುದು ಸಲ್ಲ. ಈ ವೃತ್ತಿಯಲ್ಲಿ ಇರುವವರಿಗೆ ಪುನರ್ವಸತಿ ಕಲ್ಪಿಸಿ ಉತ್ತಮ ಜೀವನ ನಡೆಸುವುದಕ್ಕೆ ಅವಕಾಶ ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT