ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ನೇಮಕ ಮಾಡುವ ಹಕ್ಕು ಗವರ್ನರ್‌ಗೆ ಇದೆ: ಗೃಹಇಲಾಖೆ

Last Updated 22 ಮೇ 2015, 7:09 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್‌ ಗವರ್ನರ್‌ ನಡುವಿನ ವಿವಾದಕ್ಕೆ ಗೃಹ ಇಲಾಖೆ ತಾತ್ಕಾಲಿಕವಾಗಿ ತೆರೆ ಎಳೆದಿದ್ದು ಉನ್ನತ ಅಧಿಕಾರಿಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಲೆಫ್ಟಿನೆಂಟ್‌ ಗವರ್ನರ್‌ಗೆ ಇದೆ ಎಂದು ಗೃಹ ಇಲಾಖೆ ತಿಳಿಸಿದೆ.

ಈ ಸಂಬಂಧ ವಿಶೇಷ ಪ್ರಕಟಣೆ ಹೊರಡಿಸಿರುವ ಗೃಹಇಲಾಖೆ ಉನ್ನತ ಅಧಿಕಾರಿಗಳ ನೇಮಕ ಮಾಡುವ ಮತ್ತು ಅವರನ್ನು ವರ್ಗಾವಣೆ ಮಾಡುವ ಅಧಿಕಾರ ಲೆಫ್ಟಿನೆಂಟ್‌ ಗವರ್ನರ್‌ಗೆ ಇದೆ ಎಂದು ಸ್ಪಷ್ಟಪಡಿಸಿದೆ.

ಗುರುವಾರ ಸಂಜೆ ಈ ಬಗ್ಗೆ ಪ್ರಧಾನ ಮಂತ್ರಿ ಮತ್ತು ಗೃಹ ಇಲಾಖೆ ಎರಡು ಭಾರಿ ಮಾತುಕತೆ ನಡೆಸಿದ ಬಳಿಕ ಈ ಅಧಿಸೂಚನೆಗೆ ಸಮ್ಮತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT