ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವರ್ಗ: ಮಮತಾ ಕೋಪ

Last Updated 7 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಲೋಕಸಭಾ ಚುನಾವಣೆ ಹಿನ್ನೆಲೆ­ಯಲ್ಲಿ ಚುನಾವಣಾ ಆಯೋಗ ಪಶ್ಚಿಮ ಬಂಗಾಲದ ಐವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಒಬ್ಬ ಜಿಲ್ಲಾಧಿಕಾರಿ­ಯನ್ನು ವರ್ಗಾ­ವಣೆ ಮಾಡಿ ಆದೇಶ ಹೊರಡಿಸಿದೆ.

ಮಾಲ್ದಾ, ಬೀರ್‌ಭೂಮ್‌, ಬುರ್ದ್ವಾನ್‌, ಪಶ್ಚಿಮ ಮಿಡ್ನಾಪುರ ಮತ್ತು ಮುಶಿದಾಬಾದ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ಹಾಗೂ 24 ಪರಗಣ ಜಿಲ್ಲೆಯ ಜಿಲ್ಲಾಧಿ­­ಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸುನಿಲ್‌ ಗುಪ್ತ ಸುದ್ದಿಗಾರರಿಗೆ ತಿಳಿಸಿದರು. ಚುನಾವಣಾ ಆಯೋಗ ಅಧಿಕಾರಿ­ಗಳನ್ನು ವರ್ಗಾವಣೆ ಮಾಡಿರುವುದರ ಬಗ್ಗೆ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ರಾಜ್ಯದ ಮುಖ್ಯಮಂತ್ರಿಯಾ­ಗಿರುವಾಗ ಯಾರ ವರ್ಗಾವಣೆಗೂ  ಅವಕಾಶ ಕೊಡುವುದಿಲ್ಲ. ನನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಅದಕ್ಕೂ ಸಿದ್ಧವಿದ್ದೇನೆ’ ಎಂದು ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ.
‘ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ಚುನಾವಣಾ ಆಯೋಗ ಹೇಗೆ ಅಧಿಕಾ­ರಿಗಳನ್ನು ವರ್ಗಾವಣೆ ಮಾಡಿದೆ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಕಾಂಗ್ರೆಸ್‌ ಪಕ್ಷದ  ಜಯವನ್ನು ಸುಲ­ಭ­ಗೊಳಿಸಲು ನೀವು (ಚುನಾವಣಾ ಆಯೋಗ) ಅವರ ಮಾತು ಕೇಳುತ್ತೀರಿ. ನನ್ನ ರಾಜೀನಾಮೆ ಪಡೆಯಿರಿ. ಆದರೆ ಅಧಿಕಾರಿಗಳನ್ನು ಮಾತ್ರ ಈಗಿರುವ ಸ್ಥಾನದಿಂದ ಕದಲಲು ಬಿಡುವುದಿಲ್ಲ’ ಎಂದಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಏ. 17ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT