ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಪಮಾಗೆ ಬೆಸಗರಳ್ಳಿ ರಾಮಣ್ಣ ಪ್ರಶಸ್ತಿ

Last Updated 20 ಮೇ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು:  ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನವು ನೀಡುವ 2012ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾಸಂಕಲನ ಪ್ರಶಸ್ತಿಗೆ ಅನುಪಮಾ ಪ್ರಸಾದ್ ಅವರ `ದೂರತೀರ' ಕಥಾಸಂಕಲನವು ಆಯ್ಕೆಯಾಗಿದೆ.

ಕೃತಿಯನ್ನು ಬಳ್ಳಾರಿಯ ಪಲ್ಲವ ಪ್ರಕಾಶನ ಸಂಸ್ಥೆಯು ಪ್ರಕಟಿಸಿದೆ. ಪ್ರಶಸ್ತಿಯು ರೂ 25 ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ಒಳಗೊಂಡಿರುತ್ತದೆ.

ಜೂನ್ 8 ರಂದು ಮಂಡ್ಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕತೆಗಾರ ಡಾ.ಕೃಷ್ಣಮೂರ್ತಿ ಹನೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾದಂಬರಿಕಾರ ಕುಂ.ವೀರಭದ್ರಪ್ಪ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT