ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ

Last Updated 13 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ಆರ್‌.ಎಂ.ವಿ. ಎರಡನೇ ಹಂತ ನ್ಯೂ. ಬಿ.ಇ.ಎಲ್‌. ರಸ್ತೆಯಲ್ಲಿರುವ  ಎಂ. ಎಸ್‌. ರಾಮಯ್ಯ ಆಸ್ಪತ್ರೆ ಎದುರಿನ 80 ಅಡಿ ರಸ್ತೆಯಲ್ಲಿ ಸಂಜೆಯಾಗುತ್ತಿದ್ದಂತೆ ಸಂಚರಿಸುವುದು ತುಂಬಾ ಕಷ್ಟವಾಗುತ್ತಿದೆ.

ಸಂಜೆಯಾಗುತ್ತಿದ್ದಂತೆ ಇಲ್ಲಿರುವ  ಹೋಟೆಲ್‌ಗಳು, ಐಸ್‌ಕ್ರೀಮ್‌ ಪಾರ್ಲರ್‌, ಕಾಫಿ ಡೇ ಮುಂತಾದ ಮಳಿಗೆಗಳಿಗೆ ನಾನಾ ಕಡೆಯಿಂದ ಬರುವ ಜನರು ತಮ್ಮ ವಾಹನಗಳನ್ನು  ರಸ್ತೆಯಲ್ಲಿ ಬೇಕಾಬಿಟ್ಟಿ ಪಾರ್ಕ್‌ ಮಾಡುತ್ತಾರೆ. ನಂತರ ಯುವಕರ ಸರದಿ. ಇದರೊಂದಿಗೆ ಅತಿವೇಗವಾಗಿ ತಮ್ಮ ವಾಹನಗಳನ್ನು ಚಲಾಯಿಸುವ ಮೂಲಕ ಕರ್ಕಶವಾದ ಶಬ್ದವನ್ನು ಮಾಡುತ್ತಾರೆ.

ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಹಾಗೂ ಪಾದಚಾರಿಗಳಿಗೆ ಈ ರಸ್ತೆಯಲ್ಲಿ ಸಂಚರಿಸುವುದಕ್ಕೆ ತುಂಬಾ ಕಷ್ಟವಾಗುತ್ತಿದೆ. ಡ್ರ್ಯಾಗ್‌ ರೇಸ್‌ ಈ ರಸ್ತೆಯಲ್ಲಿ ಸರ್ವೇ ಸಾಮಾನ್ಯವಾಗಿದೆ. ಇದರಿಂದ ಅನೇಕ ಅಪಘಾತಗಳು ಸಂಭವಿಸಿವೆ.

ಇನ್ನೊಂದು ಆಘಾತಕಾರಿ ವಿಷಯವೆಂದರೆ ಈ ರಸ್ತೆಯಲ್ಲಿ ಬಹಿರಂಗವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಈ ಕಾರಣದಿಂದ ಸಾಮಾನ್ಯ ಜನರು ಈ ರಸ್ತೆಯಲ್ಲಿ ನಿರ್ಭಯವಾಗಿ ಸಂಚರಿಸುವಂತಿಲ್ಲ.

ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳಿಗೆ ಕೂಡಲೇ ಕಡಿವಾಣ ಹಾಕಬೇಕು. ಜತೆಗೆ ರಸ್ತೆಯ ಅರ್ಧಭಾಗಕ್ಕೆ ತಂದು ನಿಲ್ಲಿಸುವ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT