ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕತೆ ಕಡೆಗಣನೆ

Last Updated 24 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಭಾರತದ ಪ್ರತಿ ಎರಡನೇ ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ. ಆದರೆ,  ದೇಶದ ಹತ್ತು  ರಾಜಕೀಯ ಪಕ್ಷಗಳ ಪೈಕಿ ಕೇವಲ ಐದು ಪಕ್ಷ­ಗಳು ಮಾತ್ರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾ­ಪಿಸಿ­ರುವ ಪ್ರಮುಖ ವಿಷಯಗಳಲ್ಲಿ ಈ ವಿಷಯ­ ಸೇರಿಸಿವೆ ಎಂದು ಇತ್ತೀಚಿನ ಅಧ್ಯಯನ ವರದಿ ಬಹಿರಂಗಪಡಿಸಿದೆ.

ಹತ್ತು ಪ್ರಮುಖ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯನ್ನು ವಿಶ್ಲೇಷಿಸಿ ‘ಚೈಲ್ಡ್‌ ರೈಟ್ಸ್‌ ಎಂಡ್‌ ಯೂ’ (ಕ್ರೈ) ಈ ಅಂಶ ಕಂಡುಕೊಂಡಿದೆ. ಅಪೌಷ್ಟಿಕತೆ ಪ್ರಮಾಣ ಕಡಿಮೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್‌, ಸಿಪಿಐ, ಸಿಪಿಐಎಂ ಭರವಸೆ ನೀಡಿವೆ.  ಈ ವಿಚಾರ  ಕೈಗೆತ್ತಿಕೊಂಡು ಅಪೌಷ್ಟಿಕತೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಾಗಿ ಬಿಜೆಪಿ ಹೇಳಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT