ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬು ಸಲೇಂಗೆ ಒಲಿದ ಕಂಕಣ ಭಾಗ್ಯ

Last Updated 30 ಜೂನ್ 2015, 6:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಜೈಲಿನಲ್ಲಿರುವ ಭೂಗತ ಪಾತಕಿ ಅಬು ಸಲೇಂ ಥಾಣೆ ಮೂಲದ ಯುವತಿಯನ್ನು ಮದುವೆಯಾಗುವುದಾಗಿ ತಿಳಿಸಿದ್ದಾರೆ.

ಥಾಣೆ ಮೂಲದ 25  ವರ್ಷದ ಯುವತಿಯೊಬ್ಬರು ಅಬು ಸಲೇಂನನ್ನು ಮದುವೆಯಾಗುವುದಾಗಿ ಟಾಡಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಒಂದು ವೇಳೆ ಮದುವೆಗೆ ಅವಕಾಶ ಕಲ್ಪಿಸದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಅಬು ಸಲೇಂ, ನಾನು ಆ ಯುವತಿಯನ್ನು ಮದುವೆಯಾಗಲು ಸಿದ್ಧ ಎಂದಿದ್ದಾರೆ. ಕಾನೂನಿನ ಪ್ರಕಾರ ವಿವಾಹವಾಗಿ ಆಕೆಯನ್ನು ಪತ್ನಿಯಾಗಿ ಸ್ವೀಕರಿಸಲಿದ್ದೇನೆ. ಆ ಯುವತಿಯ ಆಸೆ ಆಕಾಂಕ್ಷೆಗಳನ್ನು ನ್ಯಾಯಾಲಯ ಗೌರವಿಸಿ ವಿವಾಹವನ್ನು ನೇರವೆರಿಸಿಕೊಡಬೇಕು ಎಂದು ಅಬು ಸಲೇಂ ಕೋರಿದ್ದಾರೆ.

1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಅಬು ಸಲೇಂ ಜೈಲು ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT