ಭಾರತೀಯ ಇಂಟರ್ನೆಟ್ ಮತ್ತು ಮೊಬೈಲ್ ಸೇವಾ ಸಂಸ್ಥೆಗಳ ಒಕ್ಕೂಟ (ಐಎಂಎಐ) ಟ್ವಿಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲ ತಾಣಗಳನ್ನು ಪರಿಣಾಮಕಾರಿಯಾಗಿ ಬಳಸುವ ವ್ಯಕ್ತಿಗಳಿಗೆ ಈ ಪ್ರಶಸ್ತಿ ನೀಡುತ್ತದೆ.
72 ವರ್ಷದ ಅಮಿತಾಬ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಆನ್ಲೈನ್ ಬ್ಲಾಗ್ಗಳಲ್ಲಿ ಸದಾ ಸಕ್ರಿಯರಾಗಿದ್ದಾರೆ ಎಂದು ‘ಐಎಂಎಐ’ ಅಭಿಪ್ರಾಯಪಟ್ಟಿದೆ. ತಮಗೆ ಲಭಿಸಿರುವ ಪ್ರಶಸ್ತಿಯನ್ನು ಅಮಿತಾಬ್ ತಮ್ಮ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಅರ್ಪಿಸಿದ್ದಾರೆ.
ಬಚ್ಚನ್ ಅವರ ಟ್ವಿಟರ್ ಖಾತೆಗೆ 10 ದಶಲಕ್ಷಕ್ಕೂ ಹೆಚ್ಚು ಹಿಂಬಾಲಕರಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ.