ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಷಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

Last Updated 9 ಜುಲೈ 2014, 9:41 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಅಮಿತ್‌ ಷಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬುಧವಾರ ನೇಮಕಗೊಂಡಿದ್ದಾರೆ.

ಇಂದು (ಬುಧವಾರ) ನಡೆದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೂ ಮುನ್ನ ಒಂದೂವರೆ ವರ್ಷ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷರಾಗಿದ್ದ ರಾಜನಾಥ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 71 ಸ್ಥಾನಗಳನ್ನು ಬಿಜೆಪಿ ತಂದುಕೊಡುವಲ್ಲಿ  ಷಾ ಅವರು ಪ್ರಮುಖ ಪಾತ್ರವಹಿಸಿದ್ದರು.

‘ಈ ಕ್ಷಣದಿಂದ ಹಾಗೂ ಇನ್ಮುಂದೆ ಅಮಿತ್ ಷಾ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ಅವರ ಆಯ್ಕೆ ಸರ್ವಾನುಮತದಿಂದ ಮಾಡಲಾಗಿದೆ’ ಎಂದು ಸಭೆಯ ಬಳಿಕ ರಾಜನಾಥ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆ ಮಂಡನೆಯಲ್ಲಿ ನಿರತರಾಗಿದ್ದ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಪತ್ರಿಕಾಗೋಷ್ಠಿಯ ವೇಳೆ ಕಾಣಿಸಿಕೊಂಡರು.

ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಷಿ, ವೆಂಕಯ್ಯ ನಾಯ್ಡು ಹಾಗೂ ಸುಷ್ಮಾ ಸ್ವರಾಜ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಗುಜರಾತ್‌ನ ಗೃಹ ಖಾತೆಯ ಮಾಜಿ ಸಚಿವರೂ ಆಗಿರುವ ಷಾ ಅವರು ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT