ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ವಿನ್‌ ರಾವ್‌ ಬಂಧನ

ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಪ್ರಕರಣ
Last Updated 27 ಜುಲೈ 2015, 6:04 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ, ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್‌ ರಾವ್‌ ಅವರ ಪುತ್ರ ಅಶ್ವಿನ್‌ ರಾವ್‌ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ.

ಎಸ್‌ಐಟಿ ತಂಡ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಅಶ್ವಿನ್‌ ರಾವ್‌ ಅವರನ್ನು ಬಂಧಿಸಿದೆ.

ವೈ. ಭಾಸ್ಕರ್‌ ರಾವ್‌ ರಾಜೀನಾಮೆ?: ತಮ್ಮ ಪುತ್ರ ಅಶ್ವಿನ್‌ ರಾವ್‌ ಬಂಧನವಾಗಿರುವುದರಿಂದ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್‌ ರಾವ್‌ ಅವರು ಸೋಮವಾರ ಸಂಜೆ ವೇಳೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, ಭಾಸ್ಕರ್‌ ರಾವ್‌ ಅವರು ನಿರೀಕ್ಷಣಾ ಜಾಮೀನು ಪಡೆಯಲು ವಕೀಲ ಅಶೋಕ್‌ ಹಾರನಹಳ್ಳಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT