ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಮಾಜಿ ಮುಖ್ಯಮಂತ್ರಿ ಜನಾರ್ದನ ರೆಡ್ಡಿ ನಿಧನ

Last Updated 9 ಮೇ 2014, 10:11 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ): ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಜನಾರ್ದನ ರೆಡ್ಡಿ ಅವರು ದೀರ್ಘಕಾಲದ ಅಸ್ವಾಸ್ಥ್ಯದ ಬಳಿಕ ಶುಕ್ರವಾರ ಬೆಳಿಗ್ಗೆ ನಿಧನರಾದರು.

80ರ ಹರೆಯದ ರೆಡ್ಡಿ ಅವರು ನರಸಂಬಂಧಿ ಸಮಸ್ಯಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಸುಕಿನ 5 ಗಂಟೆ ವೇಳೆಗೆ ಅವರು ಕೊನೆಯುಸಿರೆಳೆದರು.

ರೆಡ್ಡಿ ಅವರು ಪತ್ನಿ ಮತ್ತು ನಾಲ್ವರು ಪುತ್ರರನ್ನು ಅಗಲಿದ್ದಾರೆ.

ಆಂಧ್ರ ಪ್ರದೇಶದಿಂದ ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ರೆಡ್ಡಿ ಅವರು 1990ರ ಡಿಸೆಂಬರ್ ನಿಂದ 1992ರ ಅಕ್ಟೋಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಹಲವಾರು ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ರೆಡ್ಡಿ ರಾಜ್ಯ ಸಚಿವರಾಗಿ ಹಾಗೂ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT