ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟಿಸಂ ಪೋಷಕರಿಗೆ ವರ್ಗಾವಣೆ ಇಲ್ಲ

Last Updated 17 ನವೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆಟಿಸಂನಿಂದ ಬಳಲುತ್ತಿರುವ ಮಕ್ಕಳು ಇರುವ ಸರ್ಕಾರಿ ಉದ್ಯೋಗಿಗಳಿಗೆ ಸಾಮಾನ್ಯ ವರ್ಗಾವಣೆಯಿಂದ ವಿನಾಯಿತಿ ನೀಡಬೇಕು. ವರ್ಗಾವಣೆ ಮಾಡಿದಾಗ ಇಂತಹ ನಿಯೋಜನೆಗಳನ್ನು ಒಪ್ಪಿಕೊಳ್ಳಲು ನಿರಾಕರಿಸುವ ಈ ಉದ್ಯೋಗಿಗಳು ಸ್ವಯಂ ನಿವೃತ್ತಿ ತೆಗೆದು­ಕೊಳ್ಳುವಂತೆ ಸೂಚನೆ ನೀಡಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು (ಡಿಒಪಿಟಿ) ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ಅಂಗವಿಕಲ ಮಕ್ಕಳನ್ನು ಹೊಂದಿರುವ ಸರ್ಕಾರಿ ಉದ್ಯೋಗಿಗಳಿಗೆ ಈಗಾಗಲೇ ಸಾಮಾನ್ಯ ವರ್ಗಾವಣೆಯಿಂದ ವಿನಾಯಿತಿ ಇದೆ. ಈಗ ಆಟಿಸಂ ತೊಂದರೆಯಿಂದ ಬಳಲುತ್ತಿರುವ ಮಕ್ಕಳನ್ನು ಹೊಂದಿರುವ ಸರ್ಕಾರಿ ಉದ್ಯೋಗಿಗಳನ್ನೂ ಇದೇ ವರ್ಗಕ್ಕೆ ಸೇರಿಸಲಾಗಿದೆ.

‘ಆಟಿಸಂ ತೊಂದರೆಯಿಂದ ಬಳಲುವ ಮಕ್ಕಳಿಗೆ ನಿರಂತರ ಆರೈಕೆಯ ಅಗತ್ಯ ಇದೆ. ಇಂತಹ ಮಕ್ಕಳನ್ನು ಸರ್ಕಾರಿ ಅಧಿಕಾರಿಗಳು ನಿರಂತರವಾಗಿ ನೋಡಿಕೊಳ್ಳುವುದು ಅನಿವಾರ್ಯ. ಹಾಗಾಗಿ ಆಟಿಸಂ ತೊಂದರೆಯನ್ನು ಕೂಡ ಅಂಗವಿಕಲ ವರ್ಗದಲ್ಲಿ ಸೇರಿಸಲು ನಿರ್ಧರಿಸಲಾಗಿದೆ’ ಎಂಬ ನಿರ್ದೇಶನವನ್ನು ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಡಿಒಪಿಟಿ ನೀಡಿದೆ.

ಆಟಿಸಂ  ಇರುವ ಮಕ್ಕಳ ಪೋಷಕರಿಗೆ  ವರ್ಗಾವಣೆಯಾ­ದರೆ ಮಕ್ಕಳು ಹೊಸ ಪರಿಸರಕ್ಕೆ ಹೊಂದಿಕೊಳ್ಳುವುದು ಸಮಸ್ಯೆಯಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT