ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆಗೆ ಯತ್ನಿಸಿದ್ದ ಕ್ರೀಡಾಪಟು ಸಾವು

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಘಟನೆ
Last Updated 7 ಮೇ 2015, 7:05 IST
ಅಕ್ಷರ ಗಾತ್ರ

ಅಲಪ್ಪುಝಾ, ಕೇರಳ (ಪಿಟಿಐ): ಭಾರತೀಯ ಕ್ರೀಡಾ ಪ್ರಾಧಿಕಾರದ ಕೇರಳ ಘಟಕದ ಈಜು ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ನಾಲ್ವರು ಬಾಲಕಿಯರು ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಅವರಲ್ಲೊಬ್ಬ ಬಾಲಕಿ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ.

ಹಾಸ್ಟೆಲ್‌ನಲ್ಲಿದ್ದ ಬಾಲಕಿಯರು ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ‘ಒಥಲಂಗ’ ಎಂಬ ವಿಷಕಾರಿ ಹಣ್ಣನ್ನು ತಿಂದಿದ್ದಾರೆ ಎಂದು ಶಂಕಿಸಲಾಗಿದೆ. ಅಸ್ವಸ್ಥಗೊಂಡ ಬಾಲಕಿಯರನ್ನು ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರ ಪೈಕಿ ಚಿಕಿತ್ಸೆಗೆ ಸ್ಪಂದಿಸದ ಒಬ್ಬ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಾಲಕಿಯರು ಪುನ್ನಮಾಡ ಬಳಿಯ ಭಾರತೀಯ ಕ್ರೀಡಾ ಪ್ರಾಧಿಕಾರದ ಈಜು ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದರು. ಕೇಂದ್ರದ ಹಿರಿಯ ಅಧಿಕಾರಿಗಳ ದೈಹಿಕ ಹಾಗೂ ಮಾನಸಿಕ ಕಿರುಕುಳದಿಂದ ಬಾಲಕಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಅವರ ಪೋಷಕರು ಆರೋಪಿಸಿದ್ದಾರೆ.

ಈ ಆರೋಪವನ್ನು ತಳ್ಳಿಹಾಕಿರುವ ಬಾಲಕಿಯರ ಹಾಸ್ಟೆಲ್‌ನ ವಾರ್ಡನ್‌, ಬಾಲಕಿಯರಿಗೆ ಯಾರೂ ಕಿರುಕುಳ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಶೀಘ್ರವೇ ಉನ್ನತಮಟ್ಟದ ತನಿಖೆಗೆ ಆದೇಶಿಸಿ, ಆರೋಪಿಗಳನ್ನು ಬಂಧಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸುವುದಾಗಿ ಮೃತ ಬಾಲಕಿಯ ಸಂಬಂಧಿಕರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT