ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆ: ವರದಿ ಕೇಳಿದ ಎನ್‌ಎಚ್‌ಆರ್‌ಸಿ

Last Updated 1 ಆಗಸ್ಟ್ 2015, 9:35 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ಈಚೆಗೆ ನಡೆದ 16 ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ವರದಿ ನೀಡಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ ಆರ್‌ಸಿ) ರಾಜ್ಯ ಸರ್ಕಾರವನ್ನು ಕೋರಿದೆ.

ರೈತರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತ ವಾಗಿ ಈ ಕ್ರಮ  ಕೈಗೊಂಡಿದೆ. 4 ವಾರಗಳ ಒಳಗೆ ಈ ಬಗ್ಗೆ ವಿವರಣೆ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ನೋಟಿಸ್ ನೀಡಲಾಗಿದೆ.

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿ ಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ಹಣ ಬಾಕಿಗಳೇ ರೈತರ ಆತ್ಮಹತ್ಯೆಗೆ ಪ್ರಮುಖ ಕಾರಣ ಎಂದು ಎನ್‌ಎಚ್‌ಆರ್‌ಸಿ ಅಭಿಪ್ರಾಯ ಪಟ್ಟಿದೆ. ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT