ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದರ್ಶ ಗ್ರಾಮ: 661 ಸಂಸದರಿಂದ ದತ್ತು

Last Updated 2 ಮಾರ್ಚ್ 2015, 10:39 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಈವರೆಗೂ 661 ಸಂಸದರು ಗ್ರಾಮಗಳನ್ನು ದತ್ತು ಪಡೆದಿದ್ದಾರೆ.

ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಅಕ್ಟೋಬರ್ 11 ರಂದು ಈ ಯೋಜನೆಯನ್ನು ಉದ್ಘಾಟಿಸಿದ್ದರು.

661ರ ಸಂಸದರ ಪೈಕಿ 485 ಲೋಕಸಭೆ ಹಾಗೂ 176 ರಾಜ್ಯಸಭೆ ಸದಸ್ಯರು ದತ್ತು ಗ್ರಾಮಗಳನ್ನು ಪಡೆದಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಬಿರೇಂದ್ರ ಸಿಂಗ್ ಅವರು ರಾಜ್ಯಸಭೆಗೆ ಸೋಮವಾರ ತಿಳಿಸಿದರು.

'ಸಂಸದರ ಆದರ್ಶ ಗ್ರಾಮ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದೆ. ಯೋಜನೆಯತ್ತ ಶೇಕಡ 84 ರಷ್ಟು ಸಂಸದರು ಆಸಕ್ತಿ ತೋರಿದ್ದಾರೆ' ಎಂದು ಪ್ರಶ್ನೋತ್ತರ ವೇಳೆಯಲ್ಲಿ ಅವರು ಸದನಕ್ಕೆ ತಿಳಿಸಿದರು.

ಸಾಮಾಜಿಕ ಹಾಗೂ ಸಾಂಸ್ಕೃತಿಕ ವಲಯ ಸೇರಿದಂತೆ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಯನ್ನು ಕೇಂದ್ರೀಕರಿಸುವ ಗ್ರಾಮೀಣಾಭಿವೃದ್ಧಿಯ ಯೋಜನೆಯೇ ಸಂಸದರ ಆದರ್ಶ ಗ್ರಾಮ ಯೋಜನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT