ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದರ್ಶ ಸೊಸೈಟಿ ಕಟ್ಟಡ ಕೆಡವಲು ಬಾಂಬೆ ಹೈಕೋರ್ಟ್‌ ಆದೇಶ

Last Updated 29 ಏಪ್ರಿಲ್ 2016, 10:36 IST
ಅಕ್ಷರ ಗಾತ್ರ

ಮುಂಬೈ (ಏಜೆನ್ಸೀಸ್‌): ಆದರ್ಶ ಹೌಸಿಂಗ್‌ ಸೊಸೈಟಿ ಕಟ್ಟಡ ನೆಲಸಮಗೊಳಿಸುವಂತೆ ಬಾಂಬೆ ಹೈಕೋರ್ಟ್‌ ಶುಕ್ರವಾರ ಆದೇಶ ನೀಡಿದೆ.

ಆದರ್ಶ ಹೌಸಿಂಗ್‌ ಸೊಸೈಟಿ ಹಗರಣದಲ್ಲಿ ಆರೋಪಿಗಳಾಗಿರುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಆದೇಶ ಪ್ರಶ್ನಿಸಿ ಸುಪ್ರೀಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಹೌಸಿಂಗ್‌ ಸೊಸೈಟಿಗೆ 3 ತಿಂಗಳು ಕಾಲಾವಕಾಶ ನೀಡಲಾಗಿದೆ.

ಅಲ್ಲದೆ, ಈ ಪ್ರಕರಣದಲ್ಲಿ ಈವರೆಗೆ ಸೂಕ್ತ ಕ್ರಮ ಕೈಗೊಳ್ಳದ ಸೇನೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಹೈಕೋರ್ಟ್‌ ರಕ್ಷಣಾ ಇಲಾಖೆಗೆ ಸೂಚನೆ ನೀಡಿದೆ.

ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ ಸೈನಿಕರಿಗೆ ಹಾಗೂ ಹುತಾತ್ಮರಾದ ಸೈನಿಕರ ಕುಟುಂಬದವರಿಗೆ ಫ್ಲ್ಯಾಟ್‌ಗಳನ್ನು ಹಂಚುವ ಉದ್ದೇಶದಿಂದ ಅಪಾರ್ಟ್‌ಮೆಂಟ್‌ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗಳನ್ನು ಅಕ್ರಮವಾಗಿ ಬೇರೆಯವರಿಗೆ ಹಂಚಿಕೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT