ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ತೆರಿಗೆ ವಿವರ ಸಲ್ಲಿಕೆಗೆ ವಿಶೇಷ ಕೌಂಟರ್

Last Updated 24 ಜುಲೈ 2014, 20:12 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯ ತೆರಿಗೆ ವಿವರ ಸಲ್ಲಿಕೆಗೆ ಇದೇ, ಗುರುವಾರ (ಜುಲೈ 31) ಕೊನೆ ದಿನವಾಗಿದ್ದು, ಪಾವತಿ­ದಾರರ ಅನುಕೂಲಕ್ಕಾಗಿ ಆದಾಯ ತೆರಿಗೆ ಇಲಾಖೆಯು ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ 80ಕ್ಕೂ ಅಧಿಕ ವಿಶೇಷ ಕೌಂಟರ್‌­ಗಳನ್ನು ಆರಂಭಿಸುತ್ತಿದೆ.

ಮಂಗಳವಾರದಿಂದ (ಜುಲೈ 29) ಗುರುವಾರದವರೆಗೆ ಕಾರ್ಯನಿರ್ವ­ಹಿಸುವ ಈ ವಿಶೇಷ ಕೌಂಟರ್‌ಗಳಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆವರೆಗೆ ಆದಾಯ ತೆರಿಗೆ ವಿವರ ಸಲ್ಲಿಸಲು ಅವಕಾಶವಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಿ, ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು, ಬ್ಯಾಂಕ್, ಖಾಸಗಿ ವಲಯಗಳ ವೇತನ­ದಾರರು ಹಾಗೂ ಪಿಂಚಣಿ­ದಾರರು ವಿಶೇಷ ಕೌಂಟರ್‌­ಗಳಲ್ಲಿ ಆದಾಯ ತೆರಿಗೆ ವಿವರ ಸಲ್ಲಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT