ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ತೆರಿಗೆ ಸಿಬ್ಬಂದಿ ಮುಷ್ಕರ

Last Updated 8 ಅಕ್ಟೋಬರ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆದಾಯ ತೆರಿಗೆ ಇಲಾಖೆಯ 50 ಸಾವಿರಕ್ಕೂ ಅಧಿಕ ಸಿಬ್ಬಂದಿ ದೇಶದಾದ್ಯಂತ ಗುರುವಾರ ಒಂದು ದಿನದ ಮುಷ್ಕರ ನಡೆಸಿದರು.

ಬಡ್ತಿ ಸೇರಿದಂತೆ ಸೇವೆಗೆ ಸಂಬಂಧಿಸಿದ ಕೆಲವು ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿ ಆದಾಯ ತೆರಿಗೆ ಇಲಾಖೆ ನೌಕರರ ಸಂಘಟನೆಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿತ್ತು.

ರಾಜಧಾನಿಯಲ್ಲಿನ ಸಿವಿಕ್‌ ಸೆಂಟರ್‌ ಕಟ್ಟಡದಲ್ಲಿರುವ ಆದಾಯ ತೆರಿಗೆ ಇಲಾಖೆಯ ಪ್ರಧಾನ ಕಚೇರಿಯ ಒಳಾಂಗಣ ಸಿಬ್ಬಂದಿ ಇಲ್ಲದೇ ಬಣಗುಡುತ್ತಿದ್ದರೆ, ಹೊರ ಆವರಣದಲ್ಲಿ ಸಾವಿರಾರು ಸಿಬ್ಬಂದಿ ಮುಷ್ಕರ ನಿರತರಾಗಿ ಘೋಷಣೆ ಮೊಳಗಿಸುತ್ತಿದ್ದರು.

‘ಅ. 11ರಂದು ಸಭೆ ಸೇರಿ ಮುಂದಿನ ನಡೆ ಬಗ್ಗೆ ನಿರ್ಧರಿಸಲಾಗುವುದು’ ಎಂದು ಆದಾಯ ತೆರಿಗೆ ಇಲಾಖೆ ನೌಕರರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎ.ಕೆ.ಕನೋಜಿಯಾ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT