ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಇ: ಅಲ್ಪಸಂಖ್ಯಾತ ಸಂಸ್ಥೆಗಳ ಪ್ರವೇಶಕ್ಕೆ ತಡೆ

Last Updated 11 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಲ್ಪಸಂಖ್ಯಾತ ಸಂಸ್ಥೆಗಳು ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಯಡಿ ಹಿಂದುಳಿದ ವರ್ಗಕ್ಕೆ ಸೇರಿದ ಮಕ್ಕಳಿಗೆ ಶೇ 25ರಷ್ಟು ಸೀಟುಗಳನ್ನು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಅನುದಾನಿತ ಹಾಗೂ ಅನುದಾನ­ರಹಿತ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಆರ್‌ಟಿಇ ಅನ್ವಯಿಸದು ಎಂದಿರುವ ಸಂಸ್ಥೆ­ಗಳು ಹೈಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿ­ದ್ದವು. ಇದರ ವಿಚಾರಣೆ ನಡೆಸಿದ  ನ್ಯಾಯ­­­ಮೂರ್ತಿಗಳಾದ ಎ.ಆರ್‌.ದವೆ ಮತ್ತು ಯು.ಯು.ಲಲಿತ್‌ ಅವರಿದ್ದ ಪೀಠ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಇದೇ ವೇಳೆ,  ಉತ್ತಮ ಗುಣಮಟ್ಟದ ಪ್ರಾಥಮಿಕ ಶಾಲೆ­ಗಳನ್ನು ತೆರೆಯಲು ಸರ್ಕಾರ ಇನ್ನಷ್ಟು ಕ್ರಮಗಳನ್ನು ತೆಗೆದು­ಕೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ. ಗುಣಮಟ್ಟಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ನಮ್ಮ ದೇಶದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಿಗಿಂತ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೇ ಒಳ್ಳೆಯ ಹೆಸರಿದೆ. ಅದೇ ರೀತಿಯಲ್ಲಿ ಪ್ರಾಥಮಿಕ ಹಂತದಲ್ಲಿ ಅತ್ಯುತ್ತಮ ಶಾಲೆ­ಗಳನ್ನು ಏಕೆ ತೆರೆಯಬಾರದು ಎಂದು ನ್ಯಾಯಾಲಯ ಕೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT