ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಿಶ್ ನೆಹ್ರಾಗೆ ಶಸ್ತ್ರಚಿಕಿತ್ಸೆ

Last Updated 24 ಮೇ 2016, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ತಂಡದ ಅನುಭವಿ ಮಧ್ಯಮವೇಗಿ ಆಶಿಶ್ ನೆಹ್ರಾ ಅವರು ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆ ಪಡೆಯಲಿದ್ದಾರೆ.
ಐಪಿಎಲ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರವಾಗಿ ಆಡಿದ ಎಡಗೈ ವೇಗಿ ನೆಹ್ರಾ ಮೇ 15ರಂದು ನಡೆದಿದ್ದ ಕಿಂಗ್ಸ್ ಇಲೆವನ್ ಪಂಜಾಬ್ ಎದುರಿನ ಪಂದ್ಯದಲ್ಲಿ ಗಾಯಗೊಂಡಿದ್ದರು.

‘ನೆಹ್ರಾ ಅವರ ಬಲಗಾಲಿನ ಮಂಡಿಯ ಗಾಯವು ಗಂಭೀರವಾಗಿದೆ. ಬಿಸಿಸಿಐ ವೈದ್ಯಕೀಯ ತಜ್ಞರು ಸಂಪೂರ್ಣ ಪರೀಕ್ಷೆ ಮಾಡಿದ್ದಾರೆ. ಲಂಡನ್‌ನಲ್ಲಿರುವ ಮೂಳೆ ಶಸ್ತ್ರಚಿಕಿತ್ಸಕ ಡಾ.ಆ್ಯಂಡ್ರ್ಯೂ ವಿಲ್ಲಿಯಮ್ಸ್ ಅವರ ಬಳಿಗೆ ಸಲಹೆ ಪಡೆಯಲು ಸೂಚಿಸಿದ್ದರು. ವಿಲಿಯಮ್ಸ್‌ ಅವರು ಪರೀಕ್ಷೆ ನಡೆಸಿ ಶಸ್ತ್ರಚಿಕಿತ್ಸೆ ಅವಶ್ಯಕ ಎಂದು ಹೇಳಿದ್ದಾರೆ. ಶೀಘ್ರದಲ್ಲಿಯೇ ನೆಹ್ರಾ ಶಸ್ತ್ರಚಿಕಿತ್ಸೆ ಪಡೆಯಲಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೆಹ್ರಾ ಅವರು ಐಪಿಎಲ್‌ನಲ್ಲಿ ಎಂಟು ಪಂದ್ಯಗಳಲ್ಲಿ ಆಡಿದ್ದರು. ಒಟ್ಟು ಎಂಟು ವಿಕೆಟ್‌ಗಳನ್ನು ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT