ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ, ಸಂಶೋಧನೆ ಕೇಂದ್ರ ಉದ್ಘಾಟನೆ

Last Updated 27 ಜುಲೈ 2014, 20:16 IST
ಅಕ್ಷರ ಗಾತ್ರ

ಯಲಹಂಕ: ಇಲ್ಲಿನ ಉಪನಗರದಲ್ಲಿ ನವಚೇತನ ಆಸ್ಪತ್ರೆ ಮತ್ತು ಸಂಶೋ­ಧನಾ ಕೇಂದ್ರವನ್ನು ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಭಾನು­ವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಚಿಕಿತ್ಸೆಗೆಂದು ಆಸ್ಪತ್ರೆಗೆ ಬರುವ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವ ಮೂಲಕ ನಿಸ್ವಾ­ರ್ಥ ಸೇವೆ­ಯನ್ನು ಮಾಡಬೇಕು. ರೋಗಿ­ಗಳನ್ನು ಪ್ರೀತಿ, ವಿಶ್ವಾಸದಿಂದ ಆರೈಕೆ ಮಾಡುವ ಮೂಲಕ ಅವರ ಬಹುತೇಕ ಕಾಯಿಲೆ­ಗಳನ್ನು ಗುಣಪಡಿಸಬಹುದಾಗಿದೆ ಎಂದು ಸಲಹೆ ನೀಡಿದರು.

ಕೃಷಿ ಸಚಿವ ಕೃಷ್ಣಬೈರೇಗೌಡ ಮಾತ­ನಾಡಿ, ಇಲ್ಲಿನ ಜನರು ಈ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗಳಿಗೆ ತೆರಳ­ಬೇಕಾದ ಪರಿಸ್ಥಿತಿಯಿದ್ದುದರಿಂದ ಈ ಭಾಗ­ದಲ್ಲಿ ವಿಶೇಷ ಸೌಲಭ್ಯಗಳುಳ್ಳ ಆಸ್ಪತ್ರೆಯ ಅವಶ್ಯಕತೆಯಿತ್ತು. ಅದರಂತೆ ನೂತನವಾಗಿ ಆರಂಭ­ವಾಗಿರುವ ಈ ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ರೋಗಿಗಳಿಗೆ ಉತ್ತಮ ಆರೋಗ್ಯಸೇವೆ ದೊರೆಯು­ವಂತಾಗಲಿ ಎಂದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಆರ್‌.­ಉಮಾಶಂಕರ್‌ ಪ್ರತಿಕ್ರಿಯಿಸಿ, ಆಸ್ಪತ್ರೆಯಲ್ಲಿ  ಸಿಟಿ ಸ್ಕ್ಯಾನಿಂಗ್‌, ಅಪ­ಘಾತ ತುರ್ತು ಚಿಕಿತ್ಸಾ ವಿಭಾಗ, ಫಾರ್ಮಸಿ, ಕ್ಷ–ಕಿರಣ, ಸಂಶೋಧನಾ ಕೇಂದ್ರ, ಎನ್‌ಐಸಿಯು, ಐಸಿಯು ಘಟಕಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿವೆ ಎಂದರು.

ವಿಶೇಷ ಸೌಲಭ್ಯಗಳಿರುವ ಇತರೆ ಆಸ್ಪತ್ರೆಗಳಿಗೆ ಹೋಲಿಸಿದರೆ ನಮ್ಮ ಆಸ್ಪತ್ರೆ­ಯಲ್ಲಿ ಕಡಿಮೆ ವೆಚ್ಚದಲ್ಲಿ ಎಲ್ಲ ವರ್ಗದ ಜನರಿಗೂ ಅನುಕೂಲ ವಾಗುವ ರೀತಿ­ಯಲ್ಲಿ ಚಿಕಿತ್ಸೆ ನೀಡಲಾಗುವುದು. ಭವಿಷ್ಯ­ದಲ್ಲಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಬಡಜನರಿಗೆ ಒಳ್ಳೆಯ ಆರೋಗ್ಯ­ಸೇವೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT