ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರ ಪದಾರ್ಥ: ಸ್ಥಳೀಯ ತೆರಿಗೆ ರದ್ದು ಮಾಡಲು ಸೂಚನೆ

Last Updated 24 ಜುಲೈ 2016, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬೇಳೆಕಾಳು, ಖಾದ್ಯತೈಲ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಮೇಲಿನ ಎಲ್ಲಾ ರೀತಿಯ ಸ್ಥಳೀಯ ತೆರಿಗೆಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸೂಚನೆ ನೀಡಿದೆ.

ಈ ಕುರಿತು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಹೇಮ್‌ ಪಾಂಡೆ ಅವರು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಜನರಿಗೆ ಕೈಗೆಟುಕುವ ಬೆಲೆಗೆ ಅಗತ್ಯ ವಸ್ತುಗಳು ಸಿಗುವಂತಾಗಬೇಕು ಎನ್ನುವ ಉದ್ದೇಶದಿಂದ ಈ ಸೂಚನೆ ನೀಡಲಾಗಿದೆ. ಅಗತ್ಯ ವಸ್ತುಗಳ ಕಾಯ್ದೆಯ ಸೆಕ್ಷನ್‌ 3(2)ರಂತೆ, ಬೇಳೆಕಾಳು ಸೇರಿದಂತೆ ಇತರೆ ಆಹಾರ ಪದಾರ್ಥಗಳಿಗೆ ಪ್ರತ್ಯೇಕ ಬೆಲೆ ನೀತಿಯನ್ನು ಪರಿಗಣಿಸುವಂತೆಯೂ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.

ಬೆಲೆ ನಿಯಂತ್ರಣಕ್ಕಾಗಿ ಬೆಲೆ ಸ್ಥಿರತೆ ನಿಧಿ ಯೋಜನೆ ಜಾರಿಗೊಳಿಸುವಂತೆಯೂ ತಿಳಿಸಲಾಗಿದೆ. ರೈತರು ಯಾವುದೇ ಸ್ಥಳದಲ್ಲಾದರೂ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಡಲು ಎಪಿಎಂಸಿ ಕಾಯ್ದೆಯ ಪರಾಮರ್ಶೆ ಮತ್ತು ಮಾರುಕಟ್ಟೆಯಲ್ಲಿ ದರಗಳ ಏರಿಳಿತದ ಕ್ಷಣ ಕ್ಷಣದ ಮಾಹಿತಿ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಅಕ್ರಮ ದಾಸ್ತಾನು ಮೇಲೆ ನಿಗಾ: ಹಬ್ಬದ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟಲು ಅಕ್ರಮ ದಾಸ್ತಾನು ಮತ್ತು ಕಾಳಸಂತೆಕೋರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಕೇಂದ್ರ ಸರ್ಕಾರವು ಸಲಹೆ ನೀಡಿದೆ.

‘ಅಗತ್ಯ ವಸ್ತುಗಳ ಪೂರೈಕೆ ನಿರ್ವಹಣೆ ಮತ್ತು ಕಾಳಸಂತೆ ಮಾರುಕಟ್ಟೆಗಳ ತಡೆಗೆ ಕೈಗೊಂಡ ಕ್ರಮಗಳ ವರದಿಯನ್ನು ತಿಂಗಳಿಗೊಮ್ಮೆ ಸಚಿವಾಲಯಕ್ಕೆ ಸಲ್ಲಿಸಬೇಕು. ವರದಿಯನ್ನು ಗ್ರಾಹಕ ವ್ಯವಹಾರಗಳ ಸಚಿವಾಲಯದ ಜಾಲತಾಣದಲ್ಲಿ ಪ್ರಕಟಿಸಬೇಕು’ ಎಂದೂ ರಾಜ್ಯಗಳಿಗೆ ಕಳಿಸಿರುವ ಸೂಚನೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT