ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೋನೇಷ್ಯಾದಲ್ಲಿ ವಿಮಾನ ಪತನ: 30 ಮಂದಿ ಸಾವು

Last Updated 30 ಜೂನ್ 2015, 10:41 IST
ಅಕ್ಷರ ಗಾತ್ರ

ಜಕಾರ್ತ (ಐಎಎನ್‌ಎಸ್‌): ಇಂಡೋನೇಷ್ಯಾದ ಸುಮಾತ್ರ ದ್ವೀಪದ ಸಮೀಪ ಜನವಸತಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ತಾಂತ್ರಿಕ ಸಮಸ್ಯೆಯಿಂದ ಮಿಲಿಟರಿ  ವಿಮಾನವೊಂದು ಪತನಗೊಂಡು ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ.

ಈ ಸರಕು ಸಾಗಣೆ ವಿಮಾನದಲ್ಲಿ 12 ಮಂದಿ ಸಿಬ್ಬಂದಿ ಇದ್ದರು. ತಾಂತ್ರಿಕ ಸಮಸ್ಯೆಯಿಂದ ವಿಮಾನ ಸುಮಾತ್ರ ದ್ವೀಪದ ಸಮೀಪ ಜನವಸತಿ ಪ್ರದೇಶದಲ್ಲಿ ಪತನಗೊಂಡಿತು. ಘಟನೆಯಲ್ಲಿ 18 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಇಂಡೋನೇಷ್ಯಾದ ವಾಯುಪಡೆಯ ಮುಖ್ಯಸ್ಥ ಆಗಸ್‌ ಸುಪ್ರಿಂತಾ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ವಿಮಾನ ಪತನಗೊಳ್ಳುವ ಕೆಲವೇ ಕ್ಷಣಗಳ ಮುನ್ನ ಪೈಲಟ್‌, ನಿಲ್ದಾಣದಲ್ಲಿನ ನಿಯಂತ್ರಣ ಕೊಠಡಿಗೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎನ್ನುವ ತುರ್ತು ಸಂದೇಶ ಕಳುಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಾವಿನ ಸಂಖ್ಯೆ ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಗಾಯಗೊಂಡವರನ್ನು ಸಮೀಪದ ಆದಮ್‌ ಮಲಿಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT