ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ತಮಿಳುನಾಡು ಬಂದ್‌

ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ವಿರೋಧ
Last Updated 27 ಮಾರ್ಚ್ 2015, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಕಾವೇರಿ ನದಿಗೆ ಮೇಕೆ ದಾಟುವಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆ ವಿರೋಧಿಸಿ ತಮಿಳುನಾಡಿನಲ್ಲಿ  ವಿರೋಧಪಕ್ಷಗಳ ಬೆಂಬಲದಲ್ಲಿ ರೈತ ಸಂಘಟನೆಗಳು ಶನಿ ವಾರ ಬಂದ್  ನಡೆಸಲಿವೆ. ಆದರೆ ಅಲ್ಲಿನ ರಾಜ್ಯ ಸರ್ಕಾರ ಮಾತ್ರ ರಾಜ್ಯವ್ಯಾಪಿ ಬಂದ್‌ಗೆ ಬೆಂಬಲ ನೀಡುವ ಬಗ್ಗೆ ಇನ್ನೂ ಸ್ಪಷ್ಟಪಡಿಸಿಲ್ಲ.  ಸಾರಿಗೆ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು, ಚಿಲ್ಲರೆ ವ್ಯಾಪಾರಿಗಳು, ತರಕಾರಿ ವ್ಯಾಪಾರಿಗಳು ಮತ್ತು ಮರಳು ಲಾರಿ ಮಾಲೀಕರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. 

ಬಂದ್‌, ಕಾವೇರಿ ಅಚ್ಚುಕಟ್ಟು ಜಿಲ್ಲೆಗಳಾದ ತಂಜಾವೂರು, ತಿರುವರೂರು ಮತ್ತು ನಾಗಪಟ್ಟಿಣಂಗಳಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಲಿದೆ ಎನ್ನಲಾಗುತ್ತಿದೆ. ಆಡಳಿತಾರೂಢ ಎಐಎಡಿಎಂಕೆ ಈವರೆಗೆ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಅಲ್ಲದೆ ಸಾರಿಗೆ ಸಂಘಟನೆಗಳು ಭಾಗವಹಿಸುವ ಸಾಧ್ಯತೆ ಇಲ್ಲ.

ಬಂದ್‌ ವೇಳೆ  ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ಕರ್ನಾಟಕದ ಗಡಿಯಲ್ಲಿ  ಹೆಚ್ಚಿನ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಸ್‌ ಸಂಚಾರ: ಬೆಳಿಗ್ಗೆ ತೀರ್ಮಾನ
ಬೆಂಗಳೂರು: ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸಬೇಕೇ ಬೇಡವೇ ಎಂಬ ಬಗ್ಗೆ ಶನಿವಾರ ಬೆಳಿಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದರು.

ಪ್ರತಿದಿನ ಕೆಎಸ್‌ಆರ್‌ಟಿಸಿಯ 400 ಬಸ್‌ಗಳು ತಮಿಳುನಾಡಿಗೆ ಸಂಚಾರ ನಡೆಸುತ್ತಿವೆ. ಅಲ್ಲದೆ ತಮಿಳುನಾಡು ಮೂಲಕ ಕೇರಳಕ್ಕೆ 40 ಬಸ್‌ಗಳು ಸಂಚಾರ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT