ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೂ ಮೂರು ದಿನ ಮೋಡ

Last Updated 29 ಮೇ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಇನ್ನೂ ಮೂರು ದಿನ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅರಬ್ಬಿ ಸಮುದ್ರದ ಪೂರ್ವ ಭಾಗದಿಂದ ಪಶ್ಚಿಮದ ಕಡೆಗೆ ಪ್ರಬಲ ಮೇಲ್ಮೈ ಸುಳಿಗಾಳಿ ಬೀಸುತ್ತಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೇ ವಾತಾವರಣ ಇರಲಿದೆ. ಉತ್ತರ  ಒಳನಾಡಿನಲ್ಲಿ  ಒಳನಾಡಿನ ಅಲ್ಲಲ್ಲಿ ಮಳೆಯಾಗಲಿದೆ ಎಂದರು.

ಮೇಲ್ಮೈ ಸುಳಿಗಾಳಿಯಿಂದಾಗಿ ಹಗಲು ವೇಳೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಹಾಗೂ ರಾತ್ರಿ ಭಾರಿ ಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT