ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೂ 115 ಮಂದಿಗೆ ವಂಚಿಸಿರುವ ಆರೋಪಿ

Last Updated 29 ನವೆಂಬರ್ 2015, 19:57 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ಬಡಾವಣೆ ಅಭಿವೃದ್ಧಿಪಡಿಸಿ ಕಡಿಮೆ ಬೆಲೆಗೆ ನಿವೇಶನ ಹಂಚಿಕೆ ಮಾಡುವುದಾಗಿ ವಿಧಾನ ಪರಿಷತ್ ಸಚಿವಾಲಯದ ನೌಕರರಿಗೆ ವಂಚಿಸಿದ ಆರೋಪದಡಿ ಬಂಧಿತನಾಗಿರುವ ಕೆ.ವಿ. ವೆಂಕಟೇಶ್‌ ಇನ್ನೂ 115 ಮಂದಿಗೆ ಇದೇ ರೀತಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ನಿವೇಶನದ ಆಸೆಗೆ ಈತನಿಗೆ ಹಣ ಕೊಟ್ಟವರ ಜತೆ ಬಾಗಲೂರು ಠಾಣೆ ಇನ್‌ಸ್ಪೆಕ್ಟರ್‌ ಎ. ಅಂಜನ್‌ ಕುಮಾರ್ ಭಾನುವಾರ ಸಭೆ ನಡೆಸಿದರು. ಈ ವೇಳೆ ‘ನಾವು ಸಹ ವೆಂಕಟೇಶ್‌ಗೆ ಹಣ ಕೊಟ್ಟಿದ್ದೇವೆ’ ಎಂದು 115 ಮಂದಿ ದಾಖಲೆ ಪತ್ರಗಳ ಪ್ರತಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯು ಬಡಾವಣೆ ಅಭಿವೃದ್ಧಿಪಡಿಸಿ ನಿವೇಶನ  ನೀಡುವುದಾಗಿ ‘ವಿಧಾನ ಪರಿಷತ್ ಸಚಿವಾಲಯ ನೌಕರರ ಕಲ್ಯಾಣ ವೇದಿಕೆ’ಯ 360 ಸದಸ್ಯರಿಗೆ ₹23 ಕೋಟಿ ವಂಚನೆ ಮಾಡಿದ್ದ ಆರೋಪ ಎದುರಿಸುತ್ತಿದ್ದಾನೆ. ಸದ್ಯ ಆತನನ್ನು ಬಂಧಿಸಿರುವ ಬಾಗಲೂರು ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸಿ ಜಾಲದ ಬಗ್ಗೆ ಕೆದಕುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT