ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಪ್ಪಾಡಿಯಲ್ಲಿ ಎಸ್‌ಬಿಐ ‘ಮಿನಿ ಎಟಿಎಂ’ ಆರಂಭ

Last Updated 28 ಜುಲೈ 2014, 19:45 IST
ಅಕ್ಷರ ಗಾತ್ರ

ಕುಣಿಗಲ್‌: ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಇತ್ತೀಚೆಗೆ ‘ಮಿನಿ ಎಟಿಎಂ’ ಘಟಕ ಆರಂಭಿಸಿದೆ.
ಈ ‘ಎಟಿಎಂ’ನಿಂದ ಒಂದು ದಿನಕ್ಕೆ ರೂ.1,000 ನಗದು ಪಡೆಯಬಹುದು. ಮಹಿಳೆಯರು ಸೇರಿದಂತೆ ಗ್ರಾಮೀಣ ಜನರ ಅನುಕೂಲವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಮಿನಿ ಎಟಿಎಂ ಆರಂಭಿಸಲಾಗಿದೆ ಎಂದು ಬ್ಯಾಂಕ್‌ನ ಉಪ ವ್ಯವಸ್ಥಾಪಕ ನಿರ್ದೇಶಕ ಅಶ್ವಿನಿ ಮೆಹ್ರಾ ಇಲ್ಲಿ ಹೇಳಿದರು.

ಇಪ್ಪಾಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶೇ 100ರಷ್ಟು ಸಾಲ ವಸೂಲಿ ಆಗಿರುವುದಕ್ಕೆ ಮೆಹ್ರಾ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT