ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರ ಮರಣದಂಡನೆಗೆ ಸುಪ್ರೀಂಕೋರ್ಟ್‌ ತಡೆ

ದೆಹಲಿ ಸಾಮೂಹಿಕ ಅತ್ಯಾಚಾರ
Last Updated 1 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಇಬ್ಬರು ಅಪರಾಧಿಗಳಿಗೆ ವಿಧಿಸಲಾಗಿ ರುವ  ಮರಣದಂಡನೆಗೆ ಸುಪ್ರೀಂ ಕೋರ್ಟ್‌ ಏ.7 ರವರೆಗೆ ತಡೆ ನೀಡಿ ಮಂಗಳವಾರ ಆದೇಶಿಸಿದೆ. ಇದೇ ವೇಳೆ ವಿಚಾರಣಾ ನ್ಯಾಯಾಲಯ ಆದೇಶ ಪ್ರತಿಯನ್ನು ಹಾಜರುಪಡಿಸುವಂತೆ ಹೇಳಿದೆ.

ನ್ಯಾಯಮೂರ್ತಿ ಬಿ.ಎಸ್‌.­ಚೌಹಾಣ್‌ ಮತ್ತು ಜೆ.ಚಲಮೇಶ್ವರ್‌ ಈ ಆದೇಶ ನೀಡಿದ್ದು, ಮಾ. 13 ರಂದು ನಾಲ್ವರು ಅಪರಾಧಿಗಳಿಗೆ ಮರಣ ದಂಡನೆ ವಿಧಿಸಿದ್ದ ದೆಹಲಿ ನ್ಯಾಯಾಲ­ಯದ ಆದೇಶವನ್ನು ಪರಿಶೀಲನೆ ನಡೆಸಿದ್ದಾಗಿ ತಿಳಿಸಿದರು. ಇದೇ ವೇಳೆ ಈ ಅಪರಾಧಿಗಳಿಗೆ ವಿಚಾರಣಾ ನ್ಯಾಯಾ­ಲಯ ನೀಡಿದ್ದ ಶಿಕ್ಷೆಯನ್ನು ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಅತ್ಯಾಚಾರ ಎಸಗಿದ್ದ ಮುಖೇಶ್‌ ಮತ್ತು ಪವನ್‌ ಗುಪ್ತಾ ಅವರ ಮರಣ­ದಂಡನೆಯನ್ನು ಏ.7 ರವರೆಗೆ ತಡೆ­ಹಿಡಿಯಲಾಗಿದೆ.

ಸುಪ್ರೀಂಕೋರ್ಟ್‌ ಈ ಹಿಂದೆ ಈ ಇಬ್ಬರ ಮರಣದಂಡನೆಗೆ ಮಾ.15 ರವರೆಗೆ ತಡೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT