ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಮ್ರಾನ್ ಅನ್ಸಾರಿ ಹೊಸ ಅಧ್ಯಕ್ಷ

Last Updated 19 ಜುಲೈ 2016, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಇಲ್ಲಿನ ಕ್ರೀಡಾ ಸಚಿವ ಇಮ್ರಾನ್‌ ಅನ್ಸಾರಿ ಅವರು ಮಂಗಳವಾರ ಆಯ್ಕೆಯಾಗಿದ್ದಾರೆ.

ಇದಕ್ಕೂ ಮೊದಲು ನ್ಯಾಷನಲ್‌ ಕಾನ್ಪೆರೆನ್ಸ್‌ನ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ  ಅಧ್ಯಕ್ಷರಾಗಿದ್ದರು. ಒಂದು ಅವಧಿಗೆ ಅಧ್ಯಕ್ಷರಾಗಿದ್ದವರು ಮೂರು ವರ್ಷಗಳ ನಂತರ ಮತ್ತೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಲೋಧಾ ಸಮಿತಿ ತನ್ನ ಶಿಫಾರಸಿನಲ್ಲಿ ಹೇಳಿದೆ.

‘ರಾಜ್ಯದಲ್ಲಿ ಕ್ರಿಕೆಟ್ ಬೆಳವಣಿಗೆಗೆ ಶ್ರಮಿಸುತ್ತೇನೆ. ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದು’ ಹೊಸ ಅಧ್ಯಕ್ಷರು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT