ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾಕ್‌ಗೆ ಸೇನೆ ಕಳುಹಿಸುವುದಿಲ್ಲ: ಜೇಟ್ಲಿ

Last Updated 24 ಜೂನ್ 2014, 12:02 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಇರಾಕ್‌­ನಲ್ಲಿ ನಾಗರಿಕ ಕಲಹದ ಬಿಕ್ಕಟ್ಟಿನಿಂದ ಸಮಸ್ಯೆಗೆ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಅಲ್ಲಿಗೆ ಸೇನೆ ಕಳುಹಿಸಲಾ­ಗುವುದು ಎಂಬ ವದಂತಿಯನ್ನು ರಕ್ಷಣಾ ಸಚಿವ ಅರುಣ್‌ ಜೇಟ್ಲಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. 

ಭಾರತೀಯರನ್ನು ರಕ್ಷಿಸಲು ಇರಾ­ಕ್‌ಗೆ ಸೇನೆ ಕಳುಹಿಸಲಾಗುತ್ತ­ದೆಯೇ ಎಂಬ  ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ಯಾವುದೇ ಯೋಜನೆ ಇಲ್ಲ, ಊಹಾ­ಪೋಹಗಳಿಗೆ ಕಿವಿಗೊ­ಡಬೇಡಿ ಎಂದರು.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶದಂತೆ, ಇರಾಕ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಭಾರತೀಯರು ನೆಲೆಸಿದ್ದು, ಇವರಲ್ಲಿ 120 ಜನ ಬಿಕ್ಕಟ್ಟಿಗೆ ಸಿಲುಕಿದ್ದಾರೆ. 39 ಭಾರತೀ­ಯರನ್ನು ಉಗ್ರರು ಅಪಹರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT