ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರೋಮ್‌ ಶರ್ಮಿಳಾ: 16 ವರ್ಷಗಳ ಉಪವಾಸ ಸತ್ಯಾಗ್ರಹ ಅಂತ್ಯ

Last Updated 26 ಜುಲೈ 2016, 10:00 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದ ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್‌ ಶರ್ಮಿಳಾ ಕಳೆದ 16 ವರ್ಷಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈಶಾನ್ಯ ರಾಜ್ಯಗಳು ಮತ್ತು ಕಾಶ್ಮೀರದಲ್ಲಿ  ಸೇನಾ ಯೋಧರು ನಡೆಸುತ್ತಿದ್ದ ದಬ್ಬಾಳಿಕೆ ಮತ್ತು ದೌರ್ಜನ್ಯವನ್ನು ಖಂಡಿಸಿ ಇರೋಮ್‌ ಶರ್ಮಿಳಾ  2000ನೇ ವರ್ಷದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಮಣಿಪುರದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಅವರು ಸತ್ಯಾಗ್ರಹವನ್ನು ನಿಲ್ಲಿಸಲಿದ್ದಾರೆ. ಆಗಸ್ಟ್‌ ತಿಂಗಳ 9ರಂದು ಅಧಿಕೃತವಾಗಿ ಉಪವಾಸವನ್ನು ಕೈಬಿಡಲಿದ್ದಾರೆ ಎಂದು ಖಾಸಗಿ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT