ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಲಾಖೆಗಳ ಕಾರ್ಯವೈಖರಿ ಚರ್ಚೆ

ಯಳಂದೂರು ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ; ಅಧಿಕಾರಿಗಳಿಗೆ ತರಾಟೆ
Last Updated 28 ಜೂನ್ 2016, 10:59 IST
ಅಕ್ಷರ ಗಾತ್ರ

ಯಳಂದೂರು: ತಾಲ್ಲೂಕು ಪಂಚಾಯಿತಿಗೆ ಆಯ್ಕೆಯಾಗಿರುವ ಸರ್ವ ಪಕ್ಷದ ಸದಸ್ಯರು ಒಟ್ಟಾಗಿ ದುಡಿಯುವ ಮೂಲಕ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಶಾಸಕ ಎಸ್.ಜಯಣ್ಣ ಸಲಹೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಥಮ ಸಾಮಾನ್ಯಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ 11 ಕ್ಷೇತ್ರಗಳಿಂದ ವಿವಿಧ ಪಕ್ಷಗಳಿಂದ ಆಯ್ಕೆಯಾಗಿರುವ ಸದಸ್ಯರು ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧ ಮರೆತು ಸಹಕರಿಸಬೇಕು. ಕಾಂಗ್ರೆಸ್ ಬಹುಮತ ಪಡೆದು ಅಧಿಕಾರ ಪಡೆದಿದ್ದರೂ ಬಿಜೆಪಿ, ಬಿಎಸ್ಪಿ ಮತ್ತು ಪಕ್ಷೇತರ ಸದಸ್ಯರ ಸಹಕಾರ ಅತ್ಯಗತ್ಯ ಎಂದು ಹೇಳಿದರು.

ಅಂಬಳೆ ಕ್ಷೇತ್ರದ ಸದಸ್ಯ ವೈ.ಕೆ. ಮೋಳೆ ನಾಗರಾಜು ಮಾತನಾಡಿ, ‘ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆ ವತಿಯಿಂದ ವಿತರಿಸುವ ಟಾರ್ಪಲ್‌ ಕಳಪೆಯಾಗಿದೆ. ಯಾವ ಕಂಪೆನಿಗೆ ಗುತ್ತಿಗೆ ನೀಡಿದ್ದೀರಿ” ಎಂದು ತರಾಟೆಗೆ ತೆಗೆದುಕೊಂಡರು.

ತಾಲ್ಲೂಕಿನ ರೈತರ ಹಸಿರು ಕ್ರಾಂತಿಗೆ ಕೈಜೋಡಿಸಲು ಕೃಷಿ ಇಲಾಖೆ ಸದಾ ಸಿದ್ಧವಾಗಿದೆ. ಅಗತ್ಯವಿರುವಷ್ಟು ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ಸಹಾಯಧನದಲ್ಲಿ ಕೃಷಿ ಪರಿಕರ ವಿತರಿಸಲಾಗುವುದು. ಈ ಬಾರಿ ರಸ ಗೊಬ್ಬರ ಕೊರತೆಯಾಗದಂತೆ ಕ್ರಮ ವಹಿ ಸಲಾಗುವುದು ಎಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು.

ತಾಲ್ಲೂಕು ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಗಮನಸೆಳೆದ ಮದ್ದೂರು ಸದಸ್ಯೆ ಮಲ್ಲಾಜಮ್ಮ, ಅಗತ್ಯ ಕ್ರಮ ವಹಿಸಲು ಆಗ್ರಹಿಸಿದರು. ಇದಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಪ್ರತಿಕ್ರಿಯಿಸಿ, ತಾಲ್ಲೂಕು ಆಸ್ಪತ್ರೆಗೆ 10 ಮಂದಿ ವೈದ್ಯರ ಅಗತ್ಯವಿದ್ದು, ಈಗ ಮೂವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಳಿದ 7 ವೈದ್ಯರ ನೇಮಕಕ್ಕೆ ಪ್ರಸ್ತಾವ ಸಲ್ಲಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಲೋಕಶಿಕ್ಷಣ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪ್ರಶ್ನಿಸಿದ ಸದಸ್ಯರು, ತಾಲ್ಲೂಕಿನಲ್ಲಿ ಎಷ್ಟು ಮಂದಿ ಪ್ರೇರಕರು ಮತ್ತು ಸಹ ಪ್ರೇರಕರಿದ್ದಾರೆ? ಎಷ್ಟು ಗೌರವಧನ ನೀಡಲಾಗಿದೆ? ಎಷ್ಟು ಜನ ಅನಕ್ಷರಸ್ಥರನ್ನು ನವ ಸಾಕ್ಷರರನ್ನಾಗಿ ಮಾಡಲಾಗಿದೆ? ಎಂದು ಪ್ರಶ್ನಿಸಿದರು.

ಶಿಕ್ಷಣ, ಪಶುಪಾಲನೆ, ತೋಟಗಾರಿಕೆ, ಸಮಾಜಕಲ್ಯಾಣ, ಆಹಾರ, ಸೆಸ್ಕ್, ಅರಣ್ಯ ಮತ್ತು ಸಹಕಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯವೈಖರಿಗಳ ಬಗ್ಗೆಯೂ ಚರ್ಚೆ ನಡೆಯಿತು. ಜಿ.ಪಂ. ಸದಸ್ಯ ಜೆ. ಯೋಗೇಶ್, ತಾ.ಪಂ. ಅಧ್ಯಕ್ಷ ನಂಜುಂಡಯ್ಯ, ಉಪಾಧ್ಯಕ್ಷೆ ಪದ್ಮಾವತಿ, ಇಒ ಡಾ.ಪ್ರೇಮ್‌ಕುಮಾರ್, ಸದಸ್ಯರಾದ ವೆಂಕಟೇಶ್, ಸಿದ್ದರಾಜು, ಹೊನ್ನೂರು ನಿರಂಜನ್, ಭಾಗ್ಯಮ್ಮ, ಕೆಸ್ತೂರು ಪುಟ್ಟು, ಕಂದಹಳ್ಳಿ ಪಲ್ಲವಿ, ಶಾರದಾಂಬ, ಬಿಇಒ ಮಲ್ಲಿಕಾರ್ಜುನ, ಮಹದೇವು, ರಾಚಪ್ಪ, ಭಾಸ್ಕರ್, ಎಇಇ ರವಿಕುಮಾರ್, ಶಂಕರೇಗೌಡ, ರೇಚಣ್ಣ ಇತರೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT