ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ಭಾರತದಲ್ಲಿ ಪ್ರವಾಹ: 10 ಸಾವು

Last Updated 22 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಶಿಲ್ಲಾಂಗ್‌, ಅಸ್ಸಾಂ (ಪಿಟಿಐ):  ಈಶಾನ್ಯ ಭಾರತದಲ್ಲಿ ಭಾರಿ ಮಳೆ ಸುರಿಯು­ತ್ತಿ­ರು­ವು­ದ­ರಿಂದ ಅಸ್ಸಾಂ, ಮೇಘಾಲ­ಯಗ­ಳಲ್ಲಿ  ಪ್ರವಾಹ ಉಂಟಾಗಿದ್ದು  ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಮನೆ–ಮಠಗಳನ್ನು ತೊರೆದಿದ್ದಾರೆ.

ಮೇಘಾಲಯದ ನೈರುತ್ಯ ಗರೊ ಪ್ರರ್ವತ ಶ್ರೇಣಿಗಳಲ್ಲಿ ಉಂಟಾದ ಪ್ರವಾಹದಿಂದ ಏಳು ಮಂದಿ ಸಾವನ್ನಪ್ಪಿ­ದ್ದಾರೆ. ನೂರಾರು ಮನೆಗಳು ಮುಳು­ಗಿದ್ದು ಲಕ್ಷಾಂತರ ಜನರು ತೊಂದರೆಗೆ ಸಿಲುಕಿದ್ದಾರೆ ಎಂದು ಜಿಲ್ಲಾ­­ಧಿಕಾರಿ ರಾಮ್‌ ಸಿಂಗ್‌ ಹೇಳಿದ್ದಾರೆ.

ಮಂದಿನ 24 ಗಂಟೆಗಳಲ್ಲಿ ರಾಜ್ಯದಾ­ದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT