ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ಮಾರುತ: ದ. ಭಾರತದಲ್ಲಿ ಇಂದೂ ಮಳೆ

Last Updated 26 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಈಶಾನ್ಯ ಮಾರುತವು ಚುರುಕು­ಗೊಂಡಿದ್ದು, ದಕ್ಷಿಣ ಭಾರತದ ರಾಜ್ಯ­ಗಳಲ್ಲಿ ಭಾನುವಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಸೋಮವಾರದಿಂದ ಆಂಧ್ರ­ಪ್ರದೇಶ, ತೆಲಂಗಾಣ, ಕರ್ನಾಟಕದ ದಕ್ಷಿಣ ಒಳನಾಡು,  ತಮಿಳುನಾಡು ಮತ್ತು ಕೇರಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ  ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

ರಾಯಲಸೀಮಾ, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಹಾಗೂ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಕೇರಳದ  ಕರಾವಳಿಯ ಕೆಲವು ಭಾಗ­ಗಳಲ್ಲಿ ಭಾನುವಾರ ಮಳೆಯಾಗಿದೆ. ಆಂಧ್ರ­ಪ್ರದೇಶದ ಮಾಚರ್ಲದಲ್ಲಿ 29 ಸೆಂ.ಮೀ, ಕರ್ನಾಟಕದ ಬೇವೂರಿನಲ್ಲಿ 13, ತೆಲಂಗಾಣದ ಜುನಾಸಾಗರ­ದಲ್ಲಿ 11, ತಮಿಳುನಾಡಿನ ವಾಲ್‌­ಪಾರೈ­­ನಲ್ಲಿ 10, ಕೇರಳದ ಕುದು­ನಲ್ಲಿ 8 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT