ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ರೈಲ್ವೆಗೆ 28 ಸಾವಿರ ಕೋಟಿ

Last Updated 1 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಕೊಹಿಮಾ (ಪಿಟಿಐ): ಈಶಾನ್ಯ­ರಾಜ್ಯಗಳಿಗೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದಕ್ಕೆ ಒತ್ತು  ನೀಡಿರುವ ಪ್ರಧಾನಿ ನರೇಂದ್ರ ಮೋದಿ,  ಇಲ್ಲಿ  ಹೊಸ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರವು ₨ ೨೮ ಸಾವಿರ ಕೋಟಿ ಬಿಡುಗಡೆ ಮಾಡಲಿದೆ ಎಂದು ಹೇಳಿದ್ದಾರೆ.

ಅಲ್ಲದೇ ಈಶಾನ್ಯ ಭಾಗದಲ್ಲಿ ಸಮಗ್ರ ದೂರಸಂಪರ್ಕ ವ್ಯವಸ್ಥೆ ಅಭಿವೃದ್ಧಿಗಾಗಿ೨ ಜಿ ಮೊಬೈಲ್‌    ಸಂಪರ್ಕಕ್ಕೆ ೫ ಸಾವಿರ ಕೋಟಿ ಮೊತ್ತ ವನ್ನು ಕೇಂದ್ರವು ಮಂಜೂರು ಮಾಡಿದೆ ಎಂದೂ ಅವರು ತಿಳಿಸಿದ್ದಾರೆ.

ರೈಲು, ರಸ್ತೆ ಹಾಗೂ ವಿಮಾನ ಸಂಪರ್ಕದಷ್ಟೇ ಡಿಜಿಟಲ್ ಹಾಗೂ ಅಂತರ್ಜಾಲ ಸಂಪರ್ಕವೂ ಮುಖ್ಯ ಎಂದರು. ಇಲ್ಲಿಗೆ ದೇಶ–ವಿದೇಶ ಗಳಿಂದ ಭಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ಬರುತ್ತಿ­ದ್ದಾರೆ. ಪ್ರವಾಸಿಗರಿಗೆ ಇದು ಅತ್ಯುತ್ತಮ ತಾಣವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT